
Puneeth Rajkumar: ಪುನೀತ್ ರಾಜ್ಕುಮಾರ್ ಅವರು 2021ರ ಏಪ್ರಿಲ್ 7ರಂದು ವ್ಯಾಕ್ಸಿನ್ ಪಡೆದಿದ್ದಾಗಿ ಪೋಸ್ಟ್ ಮಾಡಿದ್ದರು. ಇದಕ್ಕೆ ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದರು. ಈ ಲಸಿಕೆ ಪಡೆಯಬೇಡಿ ಎಂದು ಅವರು ಪುನೀತ್ ಬಳಿ ವಿಶೇಷ ಮನವಿ ಒಂದನ್ನು ಮಾಡಿಕೊಂಡಿದ್ದರು.

ಕೋವಿಶೀಲ್ಡ್ ಲಸಿಕೆ ಪಡೆದವರ ಮೇಲ ಅಡ್ಡಪರಿಣಾಮ ಉಂಟಾಗಲಿದೆ ಎಂದು ಕೊರೊನಾ (Corona) ಔಷಧಗಳ ತಯಾರಿಕಾ ಸಂಸ್ಥೆ ಆಸ್ಟ್ರಾಜೆನೆಕಾ ಇತ್ತೀಚೆಗೆ ಒಪ್ಪಿಕೊಂಡಿದೆ. ಇದು ಭಾರೀ ಚರ್ಚೆಗೆ ಕಾರಣವಾಗಿದೆ. ಕೊರೊನಾ ಲಸಿಕೆ ತೆಗೆದುಕೊಂಡ ಬಳಿಕ ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಈಗ ಎರಡನ್ನೂ ಲಿಂಕ್ ಮಾಡುವ ಕೆಲಸ ಆಗುತ್ತಿದೆ. ಈ ಮಧ್ಯೆ ಪುನೀತ್ (Puneeth Rajkumar) ಕುರಿತ ಪೋಸ್ಟ್ ಒಂದು ವೈರಲ್ ಆಗಿದೆ.

ಪುನೀತ್ ರಾಜ್ಕುಮಾರ್ ಅವರು 2021ರ ಅಕ್ಟೋಬರ್ 29ರಂದು ನಿಧನ ಹೊಂದಿದರು. ಅವರು ಹೃದಯಾಘಾತಕ್ಕೆ ಒಳಪಟ್ಟು ಮೃತಪಟ್ಟರು. ಸಖತ್ ಫಿಟ್ ಆಗಿದ್ದ ಅವರು ನಿಧನ ಹೊಂದುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಈಗ ಕೋವಿಶೀಲ್ಡ್ ತೆಗೆದುಕೊಂಡಿದ್ದರಿಂದಲೇ ಪುನೀತ್ಗೆ ಹೃದಯಾಘಾತ ಆಯಿತು ಎಂದು ಕೆಲವರು ಆರೋಪಿಸಿದ್ದಾರೆ.

ಪುನೀತ್ ರಾಜ್ಕುಮಾರ್ ಅವರು 2021ರ ಏಪ್ರಿಲ್ 7ರಂದು ವ್ಯಾಕ್ಸಿನ್ ಪಡೆದಿದ್ದಾಗಿ ಪೋಸ್ಟ್ ಮಾಡಿದ್ದರು. ‘ನೀವು 45 ವರ್ಷ ಮೇಲ್ಪಟ್ಟಿದ್ದರೆ ವ್ಯಾಕ್ಸಿನ್ ಹಾಕಿಸಿಕೊಳ್ಳಿ’ ಎಂದು ಮನವಿ ಮಾಡಿದ್ದರು. ಇದಕ್ಕೆ ಬೃಂದಾವನಾ ಹೆಸರಿ ಖಾತೆಯಿಂದ ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದರು. ‘ಕೋವಿಶೀಲ್ಡ್ ತೆಗೆದುಕೊಳ್ಳಬೇಡಿ. 45 ವರ್ಷ ಮೇಲ್ಪಟ್ಟವರಿಗೆ ಇದು ಒಳ್ಳೆಯದಲ್ಲ’ ಎಂದು ಬರೆಯಲಾಗಿತ್ತು. ಸದ್ಯ ಈ ಪೋಸ್ಟ್ ಮತ್ತೆ ವೈರಲ್ ಆಗುತ್ತಿದೆ. ಕೋವಿಶೀಲ್ಡ್ನಿಂದಲೇ ಪುನೀತ್ ಅವರ ರಕ್ತನಾಳದಲ್ಲಿ ಬ್ಲಡ್ ಕ್ಲಾಟ್ ಆಯಿತೇ ಎನ್ನುವ ಪ್ರಶ್ನೆ ಮೂಡಿದೆ.

ಹೆಚ್ಚಿನವರು ಪಡೆದಿದ್ದು ಇದನ್ನೇ..
ಆಸ್ಟ್ರಾಜೆನಿಕಾ ಸಂಸ್ಥೆ ಭಾರತದ ಪುಣೆ ಮೂಲದ ‘ಸೀರಂ ಇನ್ಸ್ಟಿಟ್ಯೂಟ್’ ಜೊತೆ ಸೇರಿ ಕೋವಿಶೀಲ್ಡ್ ಹೆಸರಲ್ಲಿ ಲಸಿಕೆಯನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಭಾರತದಲ್ಲಿ ಹೆಚ್ಚು ಪ್ರಮಾಣದಲ್ಲಿ ಈ ಲಸಿಕೆ ನೀಡಲಾಗಿದೆ. ಹೀಗಾಗಿ, ಈ ಬಗ್ಗೆ ಚರ್ಚೆ ಜೋರಾಗಿದೆ. ಬ್ಲಡ್ ಕ್ಲಾಟ್ಗಳಿಂದ ಹೃದಯಸ್ಥಂಬನ ಅಥವಾ ಪಾರ್ಶವಾಯು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ.
