
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ನ್ಯಾಯಾಲಯ ಬಿಗ್ ಶಾಕ್ ನೀಡಿದೆ.
ಹೆಚ್.ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಮೇ 6 ತಾರೀಖಿಗೆ ಮುಂದಿನ ವಿಚಾರಣೆ ಮುಂದೂಡಲಾಗಿದೆ. ಯಾವುದೇ ಕ್ಷಣದಲ್ಲಿ ರೇವಣ್ಣ ಬಂಧನ ಸಾಧ್ಯತೆಯಿದೆ.

ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಅಪಹರಣ ಪ್ರಕರಣ ಸಂಬಂಧ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು.
ಸುಮಾರು 2 ಗಂಟೆಗಳ ವಿಚಾರಣೆ ನಡೆಸಿದ ಕೋರ್ಟ್ ಕೆಲ ಕಾಲ ತೀರ್ಪು ಕಾಯ್ದಿರಿಸಿತು. ಬಳಿಕ ಸಂಜೆ 6.25ರ ಸುಮಾರಿಗೆ ಆದೇಶ ಪ್ರಕಟಿಸಿತು. ಜೊತೆಗೆ ಮೇ6 ಕ್ಕೆ ವಿಚಾರಣೆ ಮುಂದೂಡಿದೆ. ಈ ಮೂಲಕ ರೇವಣ್ಣ ಅವರಿಗೆ ರಿಲೀಫ್ ಸಿಕ್ಕಿಲ್ಲ.
