
ಮಾಜಿ ಸಚಿವ ಹೆಚ್ಡಿ ರೇವಣ್ಣ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಎ1 ಆಗಿದ್ದಾರೆ. ಲೈಂಗಿಕ ದೌರ್ಜನ್ಯ ಒಳಗಾದ ಸಂತ್ರಸ್ತೆಯನ್ನು ಅಪಹರಿಸಲಾಗಿತ್ತು. ಈ ಪ್ರಕರಣದಲ್ಲಿ ಹೆಚ್ಡಿ ರೇವಣ್ಣ ಅವರ ಕೈವಾಡವಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಹೆಚ್ಡಿ ರೇವಣ್ಣ ಅವರನ್ನು ಬಂಧಿಸಿದ್ದಾರೆ.

ಬೆಂಗಳೂರು, ಮೇ 05: ಅಶ್ಲೀಲ ವಿಡಿಯೋದಲ್ಲಿ ಇದ್ದಾರೆ ಎನ್ನಲಾಗಿರುವ ಸಂತ್ರಸ್ತೆಯನ್ನು ಅಪಹರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರನ್ನು ವಿಶೇಷ ತನಿಖಾ ಅಧಿಕಾರಿಗಳು ಬಂಧಿಸಿದ್ದಾರೆ. ಹೆಚ್ಡಿ ರೇವಣ್ಣ ಅವರನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರು ಪಡಿಸುವ ಮೊದಲು ರೇವಣ್ಣ ಅವರಿಗೆ ವೈದ್ಯಕೀಯ ಪಾಸಣೆ ಮಾಡಿಸಲಾಯ್ತು. ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಬಳಿ ಹೆಚ್.ಡಿ.ರೇವಣ್ಣ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸಿದ್ದಾರೆ. ಯಾವುದೇ ಪುರಾವೆ ಇಲ್ಲ, ದುರುದ್ದೇಶದಿಂದ ಅರೆಸ್ಟ್ ಮಾಡಿದ್ದಾರೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ನನ್ನ 40 ವರ್ಷಗಳ ರಾಜಕೀಯದಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲ. ಮೇ 2ನೇ ತಾರೀಖು ಯಾವುದೇ ಪುರಾವೆ ಸಿಕ್ಕಿಲ್ಲ. ಇದನ್ನು ಎದುರಿಸುವ ಶಕ್ತಿಯಿದೆ, ಎಲ್ಲವನ್ನೂ ಹೇಳುತ್ತೇನೆ ಎಂದು ಹೇಳಿದರು.

Published On – 6:55 pm, Sun, 5 May 24