Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಸಾಮಾಜಿಕ ಹೋರಾಟಗಾರ ಪದ್ಮನಾಭ ಸಾಮಂತ್ ಸಾವಿನ ತನಿಖೆಗೆ ಆಗ್ರಹಿಸಿ ತಿಂಗಳು ಕಳೆದರೂ ಕಾಣದ ಬೆಳವಣಿಗೆ : ಮತ್ತೆ ಎಸ್ಪಿ ಭೇಟಿಯಾದ ರಮಾನಾಥ ರೈ ನಿಯೋಗ

editor tv by editor tv
May 14, 2024
in ರಾಜ್ಯ
0
ಸಾಮಾಜಿಕ ಹೋರಾಟಗಾರ ಪದ್ಮನಾಭ ಸಾಮಂತ್ ಸಾವಿನ ತನಿಖೆಗೆ ಆಗ್ರಹಿಸಿ ತಿಂಗಳು ಕಳೆದರೂ ಕಾಣದ ಬೆಳವಣಿಗೆ : ಮತ್ತೆ ಎಸ್ಪಿ ಭೇಟಿಯಾದ ರಮಾನಾಥ ರೈ ನಿಯೋಗ
1.9k
VIEWS
Share on FacebookShare on TwitterShare on Whatsapp

ಬಂಟ್ವಾಳ, ಮೇ, 2024 : ಸಾಮಾಜಿಕ ಹೋರಾಟಗಾರ ಹಾಗೂ ಆರ್ ಟಿ ಐ ಕಾರ್ಯಕರ್ತ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷನಾಗಿ ಸಕ್ರಿಯವಾಗಿದ್ದ ಅವಿವಾಹಿತ ಯುವಕ, ವಾಮಪದವು ಸಮೀಪದ ಚೆನ್ನೈತ್ತೋಡಿ ಗ್ರಾಮದ ತಿಮರಡ್ಡ ನಿವಾಸಿ ಪದ್ಮನಾಭ ಸಾಮಂತ್ ಅವರ ಸಂಶಯಾಸ್ಪದ ಸಾವಿನ ತನಿಖೆ ಬಗ್ಗೆ ಮಾಹಿತಿ ಪಡೆಯಲು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮಾನಾಥ ರೈ ಅವರ ನೇತೃತ್ವದ ನಿಯೋಗ ಜಿಲ್ಲಾ ಎಸ್ಪಿ ಕಚೇರಿಗೆ ಭೇಟಿ ನೀಡಿ ಸೂಕ್ತ ತನಿಖೆ ನಡೆಸಿ ಸಾವಿನ ಸತ್ಯಾಸತ್ಯತೆ ಹೊರಗೆಳೆಯಬೇಕೆಂದು ಆಗ್ರಹಿಸಿದೆ.

ಕಳೆದ ಮಾರ್ಚ್ 31 ರಂದು ಪದ್ಮನಾಭ ಅವರ ಮೃತದೇಹ ಅವರ ಮನೆ ಬಳಿ ಗುಡ್ಡದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈತನ ಸಾವಿನಲ್ಲಿ ಸಂಶಯಗಳಿದ್ದು, ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಮುಖಂಡರ ನಿಯೋಗ ಈ ಹಿಂದೆ ಅಂದರೆ ಎಪ್ರಿಲ್ 2 ರಂದು ಜಿಲ್ಲಾ ಎಸ್ಪಿ ರಿಷ್ಯಂತ್ ಸಿ ಬಿ ಅವರನ್ನು ಭೇಟಿ ಮಾಡಿತ್ತು. ಈ ಸಂದರ್ಭ ವಿಶೇಷ ತನಿಖಾ ತಂಡ ರಚಿಸಿ ಈ ಬಗ್ಗೆ ತನಿಖೆ ನಡೆಸುವ ಬಗ್ಗೆ ಎಸ್ಪಿ ನಾಯಕರಿಗೆ ಭರವಸೆ ನೀಡಿದ್ದರು. ಮನವಿ ನೀಡಿ ತಿಂಗಳು ಕಳೆದರೂ ಯಾವುದೇ ಬೆಳವಣಿಗೆ ಕಂಡು ಬರದ ಹಿನ್ನಲೆಯಲ್ಲಿ ಇದೀಗ ಮತ್ತೆ ರಮಾನಾಥ ರೈ ನೇತೃತ್ವದ ಕಾಂಗ್ರೆಸ್ ನಿಯೋಗ ಎಸ್ಪಿ ಭೇಟಿ ನೀಡಿ ತನಿಖೆಗೆ ಆಗ್ರಹಿಸಿದೆ.

ಬಂಟ್ವಾಳ ಅಕ್ರಮ ಸಕ್ರಮ ಸಮಿತಿ 2019 ರಿಂದ 2023 ರವರೆಗಿನ ನಡೆಸಿದಂತಹ ಅಕ್ರಮ-ಸಕ್ರಮ ಭೂಮಂಜೂರಾತಿಗೆ ಸಂಬಂಧಪಟ್ಟಂತೆ ಸಮಿತಿಯು ನಡೆಸಿದಂತಹ ಅಕ್ರಮ ವ್ಯವಹಾರಗಳ ಬಗ್ಗೆ ತನಿಖೆ ನಡೆಸುವಂತೆ ಸರಕಾರವನ್ನು ಒತ್ತಾಯಿಸಿ ದೂರು ದಾಖಲಿಸಿದ್ದರು. ಬಂಟ್ವಾಳ ಕ್ಷೇತ್ರದ ಶಾಸಕರ ಹಿಂಬಾಲಕರೊಬ್ಬರು ಬಂಟ್ವಾಳ ಬೈಪಾಸ್‍ನಲ್ಲಿ ನಿರ್ಮಿಸಿದ ಅನಧಿಕೃತ ಕಟ್ಟಡದ ವಿರುದ್ದ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿಯವರ ವಿರುದ್ದ ಕ್ರಮಕೈಗೊಳ್ಳುವಂತೆ ದೂರು ನೀಡುವಲ್ಲಿ ಕೂಡ ಪ್ರಮುಖ ಪಾತ್ರ ವಹಿಸಿದ್ದರು.

ಬಂಟ್ವಾಳ ಕ್ಷೇತ್ರದ ಹಲವಾರು ಕಡೆಗಳಲ್ಲಿ ಕಳಪೆ ರಸ್ತೆ ಡಾಮಾರೀಕರಣ, ಕಾಂಕ್ರೀಟಿಕರಣ ಬಗ್ಗೆ ಸಾರ್ವಜನಿಕರ ಪರವಾಗಿ ಧ್ವನಿ ಎತ್ತಿ ಸಂಬಂಧಿಸಿದ ವ್ಯಕ್ತಿಗಳ ವಿರುದ್ಧ ದೂರನ್ನು ಸಲ್ಲಿಸಿದ್ದರು. ಸಿದ್ದಕಟ್ಟೆ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರ ಬ್ಯಾಂಕ್ ಅವ್ಯವಹಾರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ಪ್ರಶ್ನೆಯನ್ನು ಮಾಡಿದ್ದರು. ಹೀಗೆ ತಾಲೂಕಿನಾದ್ಯಂತ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳ ಬಗ್ಗೆ ಪ್ರಶ್ನೆಯನ್ನು ಮಾಡುತ್ತಾ ಭ್ರಷ್ಟರಿಗೆ ಸಿಂಹಸ್ವಪ್ನರಾಗಿದ್ದರು.
ಹೀಗಿರುವಲ್ಲಿ ಪದ್ಮನಾಭ ಸಾಮಂತ್ ಒಬ್ಬ ಧೃಡ ಮನಸ್ಸಿನ ವ್ಯಕ್ತಿಯಾಗಿದ್ದು, ಯಾವುದೇ ರೀತಿಯಲ್ಲಿ ಆತ್ಮಹತ್ಯೆ ಮಾಡತಕ್ಕಂತಹ ದುರ್ಬಲ ಮನಸ್ಸಿನ ವ್ಯಕ್ತಿಯಲ್ಲ ಎಂಬುದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿರುವ ವಿಚಾರವಾಗಿರುತ್ತದೆ.

ಆದರೆ ಅವರ ಸಾವಿನ ರೀತಿ ಮತ್ತು ಮೃತದೇಹ ಇದ್ದಂತಹ ಸ್ಥಿತಿಗತಿ ಅವರ ಸಾವಿನ ಬಗ್ಗೆ ಸಂಶಯವನ್ನು ವ್ಯಕ್ತಪಡಿಸುತ್ತಾ ಇದೆ. ಅವರು ಕೆಲವೊಂದು ರಾಜಕೀಯ ಪ್ರಭಾವಿ ವ್ಯಕ್ತಿಗಳ ವಿರುದ್ದ ಮತ್ತು ಅವರ ಅಕ್ರಮಗಳ ವಿರುದ್ದ ಯಾವುದೇ ಮುಲಾಜಿಲ್ಲದೆ ಸಂಬಂಧಿಸಿದ ಮೇಲಾಧಿಕಾರಿಗಳಿಗೆ ದೂರನ್ನು ಸಲ್ಲಿಸುತ್ತಾ ಇದ್ದರು. ಆ ಕಾರಣಕ್ಕಾಗಿ ಪದ್ಮನಾಭ ಸಾಮಂತ್ ಅವರಿಗೆ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದವು. ಈ ಬಾಬ್ತು ಪೆÇೀಲಿಸ್ ಮೇಲಾಧಿಕಾರಿಗಳಿಗೆ ದೂರನ್ನು ಸಲ್ಲಿಸಿ ಸೂಕ್ತ ರಕ್ಷಣೆಗಾಗಿ ಅರ್ಜಿಯನ್ನು ಸಲ್ಲಿಸಿದ್ದರು.

ಆದುದರಿಂದ ಈ ಎಲ್ಲಾ ಸನ್ನಿವೇಶಗಳು ಪದ್ಮನಾಭ ಸಾಮಂತ್ ಅವರ ಸಾವಿನ ಬಗ್ಗೆ ಅನುಮಾನವನ್ನು ವ್ಯಕ್ತಪಡಿಸುತ್ತಿದ್ದು, ರಾಜಕೀಯ ವಲಯದಲ್ಲಿ ಕೂಡ ಅವರ ಮೇಲೆ ವೈಯಕ್ತಿಕ ದ್ವೇಷವನ್ನು ಹೊಂದಿದ್ದ ವ್ಯಕ್ತಿಗಳು ಅವರ ಸಾವಿನ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ, ಅಪಮಾನಕಾರಕವಾಗಿ, ನಿಂದನಕಾರಿಯಾಗಿ ಮತ್ತು ಅಪಹಾಸ್ಯದ ಸುದ್ದಿಗಳನ್ನು ಪದ್ಮನಾಭ ಸಾಮಂತ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿದ್ದರು. ಈ ಎಲ್ಲಾ ವ್ಯಕ್ತಿಗಳ ಬಗ್ಗೆ ಸೂಕ್ತ ರೀತಿಯ ತನಿಖೆಯ ಅಗತ್ಯವಿರುತ್ತದೆ ಎಂದು ನಿಯೋಗ ಎಸ್ಪಿಗೆ ಮನವಿ ಮಾಡಿಕೊಂಡಿತ್ತು.
ಆದುದರಿಂದ ವ್ಯಾಪಕ ಚರ್ಚೆಗೆ ಕಾರಣವಾಗಿರುವ ಪದ್ಮನಾಭ ಸಾಮಂತ್ ಅವರ ಸಾವು ಹೇಗೆ ಸಂಭವಿಸಿತೆಂದು ಹಾಗೂ ಅದರ ಹಿಂದಿನ ಕಾರಣವನ್ನು ಕಂಡು ಹಿಡಿಯಲು ಸೂಕ್ತ ತನಿಖೆಯನ್ನು ಕೈಗೊಳ್ಳಬೇಕು, ಈ ಕಾರಣಕ್ಕಾಗಿ ಪ್ರತ್ಯೇಕ ವಿಶೇಷ ಪೊಲೀಸ್ ತಂಡವನ್ನು ರಚಿಸಿ ತನಿಖೆ ಮಾಡಬೇಕು ಎಂದು ನಿಯೋಗ ಆಗ್ರಹಿಸಿತ್ತು.

ಒಂದಾನುವೇಳೆ ಆತ್ಮಹತ್ಯೆಯ ಸಂದರ್ಭಗಳೇನಾದರೂ ತನಿಖೆಯಲ್ಲಿ ಕಂಡು ಬಂದಲ್ಲಿ, ಇದಕ್ಕೆ ಪ್ರಚೋದನೆಗೈದು ಘಟನೆಗೆ ಕಾರಣರಾದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ದ ಕೂಡಲೇ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆಯೂ ಕಾಂಗ್ರೆಸ್ ನಿಯೋಗ ಜಿಲ್ಲಾ ಎಸ್ಪಿ ಅವರನ್ನು ಒತ್ತಾಯಿಸಿತ್ತು.
ನಿಯೋಗದಲ್ಲಿ ಕೆಪಿಸಿಸಿ ಸದಸ್ಯರುಗಳಾದ ಪಿಯೂಸ್ ಎಲ್ ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ,ಎಂ ಎಸ್ ಮೊಹಮ್ಮದ್,ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷರುಗಳಾದ ಬಿ ಎಂ ಅಬ್ಬಾಸ್ ಅಲಿ, ಕೆ ಮಾಯಿಲಪ್ಪ ಸಾಲ್ಯಾನ್, ಪ್ರಮುಖರಾದ ಬಿ ಪದ್ಮಶೇಖರ ಜೈನ್, ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಜಗದೀಶ್ ಕೊಯಿಲ,ಬಿ ಆರ್ ಅಂಚನ್,ಸುರೇಶ್ ವಕೀಲರು,ಆದಂ ಕುಂಞÂ, ದೇವಪ್ಪ ಕುಲಾಲ್ ಕರ್ಪೆ,ಸುಧಾಕರ್ ಶಣೈ ಬಡಕಜೆಕಾರು,ಸದಾನಂದ ಶೆಟ್ಟಿ ಪ್ರವೀಣ್ ರೊಡ್ರಿಗಸ್ ಮೊದಲಾದವರು ಇದ್ದರು.

Previous Post

VIP ಸಂಸ್ಕೃತಿಗೆ ತಕ್ಕ ಶಾಸ್ತಿ.. ಕ್ಯೂನಲ್ಲಿ ಬಾರದ MLA ಕೆನ್ನೆಗೆ ಬಾರಿಸಿದ ಮತದಾರ; ಆಮೇಲೇನಾಯ್ತು?

Next Post

ಟಾಸ್ ಗೆದ್ದ ಲಕ್ನೋ ಬೌಲಿಂಗ್ ಆಯ್ಕೆ : ಇಂದು ಯಾರು ಗೆದ್ದರೆ RCBಗೆ ಲಾಭ?

Next Post
ಟಾಸ್ ಗೆದ್ದ ಲಕ್ನೋ ಬೌಲಿಂಗ್ ಆಯ್ಕೆ : ಇಂದು ಯಾರು ಗೆದ್ದರೆ RCBಗೆ ಲಾಭ?

ಟಾಸ್ ಗೆದ್ದ ಲಕ್ನೋ ಬೌಲಿಂಗ್ ಆಯ್ಕೆ : ಇಂದು ಯಾರು ಗೆದ್ದರೆ RCBಗೆ ಲಾಭ?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.