
IPL 2024 Final: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ 17ನೇ ಆವೃತ್ತಿಯ ಐಪಿಎಲ್ನ ಫೈನಲ್ ಪಂದ್ಯದಲ್ಲಿ ಏಕಪಕ್ಷೀಯವಾಗಿ ಹೈದರಾಬಾದ್ ತಂಡವನ್ನು ಮಣಿಸಿದ ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್ ತಂಡ ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿದೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ 17ನೇ ಆವೃತ್ತಿಯ ಐಪಿಎಲ್ನ ಫೈನಲ್ ಪಂದ್ಯದಲ್ಲಿ ಏಕಪಕ್ಷೀಯವಾಗಿ ಹೈದರಾಬಾದ್ ತಂಡವನ್ನು ಮಣಿಸಿದ ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್ ತಂಡ ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿದೆ. ಈ ಮೂಲಕ ಅಧಿಕ ಐಪಿಎಲ್ ಪ್ರಶಸ್ತಿಗಳನ್ನು ಗೆದ್ದ ತಂಡಗಳ ಪೈಕಿ ಕೆಕೆಆರ್ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಉಳಿದಂತೆ ತಲಾ 5 ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಜಂಟಿಯಾಗಿ ಮೊದಲ ಸ್ಥಾನ ಪಡೆದುಕೊಂಡಿವೆ. ಫೈನಲ್ ಪಂದ್ಯದಲ್ಲಿ ಹೈದರಾಬಾದ್ ತಂಡ ಟಾಸ್ ಗೆದ್ದಿದ್ದನ್ನು ಬಿಟ್ಟರೆ, ಉಳಿದಂತೆ ಇಡೀ ಪಂದ್ಯದಲ್ಲಿ ಎಲ್ಲಿಯೂ ಗೆಲುವಿಗಾಗಿ ಹೋರಾಟ ನೀಡಲಿಲ್ಲ. ಹೀಗಾಗಿ ಕೆಕೆಆರ್ ತಂಡ ಪಂದ್ಯದಲ್ಲಿ ಏಕಪಕ್ಷೀಯ ಗೆಲುವು ದಾಖಲಿಸಿತು


