
ಮಂಗಳೂರು/ ಉಡುಪಿ : ಲೋಕಸಭಾ ಚುನಾವಣೆಯ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದ್ದು ಉಡುಪಿಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದೆ. ಈಗಾಗಲೇ ಎರಡು ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತನ್ನ ಹತಿರದ ಸ್ಪರ್ಧಿ ಕಾಂಗ್ರೆಸ್ ನ ಪದ್ಮರಾಜ್ ಆರ್ ಪೂಜಾರಿ ಗಿಂತ 20 ಸಾವಿರ ಮತಗಳಿಂದ ಮುಂದಿದ್ದಾರೆ.
ಕ್ಷೇತ್ರದಲ್ಲಿ ನೋಟಾ ಮತಗಳು ಹೆಚ್ಚಾಗುತ್ತವೆ ಎಂಬ ನಿರೀಕ್ಷೆಯಿದ್ದರೂ ಅದು ಸುಳ್ಳಾಗಿದೆ. ನೋಟಾ ಗೆ ಸದ್ಯ 4134 ಮತ ಬಿದ್ದಿದೆ. ಚೌಟಾ 20 ಸಾವಿರ ಮತಗಳ ಲೀಡ್ ನಲ್ಲಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ-72972 (ಮುನ್ನಡೆ-29456), ಜಯ ಪ್ರಕಾಶ್ ಹೆಗ್ಡೆ-43516 ಮತಗಳನ್ನು ಆರಂಭಿಕ ಸುತ್ತಿನಲ್ಲಿ ಪಡೆದಿದ್ದಾರೆ.

ಉತ್ತರಕನ್ನಡದಲ್ಲಿ ಕಾಗೇರಿ ಮನ್ನಡೆ ಸಾಧಿಸಿದ್ದಾರೆ. ಮಂಗಳೂರಿನಲ್ಲಿ ಅಂಚೆ ಮತದಾನದಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮುನ್ನಡೆ ಸಾಧಿಸಿದ್ದಾರೆ. ಚೌಟ 12697 ಮತ ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ 6474 ಮತ ಪಡೆದಿದ್ದಾರೆ.ಹಾಸನದಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಕಾಂಗ್ರೆಸ್ ನ ಶ್ರೇಯಸ್ ಪಟೇಲ್ ಮುನ್ನಡೆ ಸಾಧಿಸಿದ್ದು, ಜೆಡಿಎಸ್ ನ ಪ್ರಜ್ವಲ್ ರೇವಣ್ಣ ಹಿನ್ನಡೆ ಅನುಭವಿಸಿದ್ದಾರೆ.
