ಪಶ್ಚಿಮ ಬಂಗಾಳ: ಏಳು ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಪಶ್ಚಿಮ ಬಂಗಾಳದ ಬಹರಂಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಬೀಗಿದ್ದಾರೆ.
ಟಿಎಂಸಿ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕ್ರಿಕೆಟಿಗೆ ಯೂಸುಫ್ ಪಠಾಣ್ ಅವರು ತಮ್ಮ ಎದುರಾಳಿಯಾಗಿರುವ ಕಾಂಗ್ರೆಸ್ ಅಭ್ಯರ್ಥಿ, ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಸೋಲಿಸಿದ್ದಾರೆ.

ಯೂಸುಫ್ ಪಠಾಣ್ 4,08,240 ಮತಗಳನ್ನು ಪಡೆದಿದ್ದಾರೆ. ಅವರ ಎದುರಾಳಿಯಾಗಿರುವ ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ವಿರುದ್ಧ 59,351 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಅಧೀರ್ ರಂಜನ್ ಚೌಧರಿ 3,48,889 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ 3,12,876 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.
