
ಇನ್ನು ಮೆರವಣಿಗೆ ನಂತರ ಮೂರು ಮಂದಿ ಮಸೀದಿ ಮುಂದೆ ಘೋಷಣೆ ಕೂಗಿದ್ದಾರೆ. ನಂತರ ಅವರಿಗೆ ಹಲ್ಲೆ ನಡೆಸಲಾಗಿದೆ. ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್ ಇದ್ದ, ಭಾರತ್ ಮಾತಾ ಕೀ ಜೈ ಎನ್ನುವ ಘೋಷಣೆಗೂ ಮೊದಲು ಬೇರೆ ಪ್ರಚೋದನಾಕಾರಿ ಘೋಷಣೆ ಕೂಗಿದ್ದರು. ಮುಂದಿನ ದಿನಗಳಲ್ಲಿ ಎಲ್ಲಾ ಠಾಣೆಗಳಲ್ಲಿ, ಎಲ್ಲ ಧರ್ಮದ ಪ್ರಮುಖರನ್ನು ಕರೆದು ಶಾಂತಿ ಸಭೆ ನಡೆಸುತ್ತೇವೆ. ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ಇರಿಸಿದ್ದೇವೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹೇಳಿದರು

ದಕ್ಷಿಣ ಕನ್ನಡ, ಜೂ.11: ಬಿಜೆಪಿ ವಿಜಯೋತ್ಸವ ಮತ್ತು ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್(Mangalore Police Commissioner Anupam Agarwal) ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ‘ಸಿಸಿಟಿವಿ ವಿಡಿಯೋ ಆಧಾರದಲ್ಲಿ 20 ಜನರನ್ನು ವಶಕ್ಕೆ ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಆರು ಮಂದಿಯನ್ನು ಬಂಧಿಸಿದ್ದೇವೆ. ಮೂರು ತಂಡದ ಮೂಲಕ ತನಿಖೆ ನಡೆಯುತ್ತಿದ್ದು, ಇನ್ನುಳಿದವರ ಬಂಧನ ಪ್ರಕ್ರಿಯೆ ನಡೆಯುತ್ತಿದೆ ಎಂದರು

ಭಾರತ್ ಮಾತಾ ಕೀ ಜೈ ಎನ್ನುವ ಘೋಷಣೆಗೂ ಮೊದಲು ಬೇರೆ ಪ್ರಚೋದನಾಕಾರಿ ಘೋಷಣೆ
ಇನ್ನು ಮೆರವಣಿಗೆ ನಂತರ ಮೂರು ಮಂದಿ ಮಸೀದಿ ಮುಂದೆ ಘೋಷಣೆ ಕೂಗಿದ್ದಾರೆ. ನಂತರ ಅವರಿಗೆ ಹಲ್ಲೆ ನಡೆಸಲಾಗಿದೆ. ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್ ಇದ್ದ, ಭಾರತ್ ಮಾತಾ ಕೀ ಜೈ ಎನ್ನುವ ಘೋಷಣೆಗೂ ಮೊದಲು ಬೇರೆ ಪ್ರಚೋದನಾಕಾರಿ ಘೋಷಣೆ ಕೂಗಿದ್ದರು. ಮುಂದಿನ ದಿನಗಳಲ್ಲಿ ಎಲ್ಲಾ ಠಾಣೆಗಳಲ್ಲಿ, ಎಲ್ಲ ಧರ್ಮದ ಪ್ರಮುಖರನ್ನು ಕರೆದು ಶಾಂತಿ ಸಭೆ ನಡೆಸುತ್ತೇವೆ. ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ಇರಿಸಿದ್ದೇವೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹೇಳಿದರು.
