Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಚಿಕನ್ ಕಬಾಬ್, ಫಿಶ್ ಆಹಾರದಲ್ಲಿ ಕೃತಕ ಬಣ್ಣ ಬಳಕೆ ನಿಷೇಧ: ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?

editor tv by editor tv
June 25, 2024
in ರಾಜ್ಯ
0
ಚಿಕನ್ ಕಬಾಬ್, ಫಿಶ್ ಆಹಾರದಲ್ಲಿ ಕೃತಕ ಬಣ್ಣ ಬಳಕೆ ನಿಷೇಧ: ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?
1.9k
VIEWS
Share on FacebookShare on TwitterShare on Whatsapp

ಕಳಪೆ ಗುಣಮಟ್ಟದ ಆಹಾರ ಸೇವನೆ ಇತ್ತಿಚೆಗೆ ಜನರ ಆರೋಗ್ಯದ ಮೇಲೆ ತೀವ್ರ ಹಾನಿಯನ್ನುಂಟುಮಾಡುತ್ತಿದೆ. ಜನಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಹಾನಿಕಾರಕ ಆಹಾರದ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಬೆಂಗಳೂರು (ಜೂ.24): ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು. ಇದೇ ವೇಳೆ ಚಿಕನ್ ಕಬಾಬ್ ಗಳಲ್ಲೂ ಕೃತಕ ಬಣ್ಣಗಳ ಬೆರಸುವಿಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪರೀಕ್ಷೆಗೊಳಪಡಿಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ  ದಿನೇಶ್ ಗುಂಡೂರಾವ್ ಅವರು ಆಹಾರ ಸುರಕ್ಷತಾ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದರು. 

ಕಳಪೆ ಗುಣಮಟ್ಟದ ಆಹಾರ ಸೇವನೆ ಇತ್ತಿಚೆಗೆ ಜನರ ಆರೋಗ್ಯದ ಮೇಲೆ ತೀವ್ರ ಹಾನಿಯನ್ನುಂಟುಮಾಡುತ್ತಿದೆ. ಜನಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಹಾನಿಕಾರಕ ಆಹಾರದ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆಯ ಮೇರೆಗೆ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳು ಗುಣಮಟ್ಟ ಪರೀಕ್ಷೆಗೆ ಒಳಪಡಿಸಲಾಗಿತ್ತು.  ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ. ವಿಶ್ಲೇಷಣೆಗೊಳಪಡಿಸಲಾದ ಮಾದರಿಗಳಲ್ಲಿ 08 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ (ಸನ್‌ಸೆಟ್ ಯೆಲ್ಲೋ 07 ಮಾದರಿಗಳು ಹಾಗೂ ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು 01) ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದೆ. The Food Safety and Standards Act, 2006 ರ ನಿಯಮ 3(1)(zz)(viii)ರನ್ವಯ ಅಸುರಕ್ಷಿತ ಎಂದು ವರದಿ ಮಾಡಲ್ಪಟ್ಟಿರುತ್ತವೆ.

The Food Safety and Standards (Food Products Standards and Food Additives) Regulations, 2011 ರ‌ ಅನ್ವಯ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿರುವುದಿಲ್ಲ. ಕೃತಕ ಬಣ್ಣಗಳು ಬಳಕೆದಾರರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟುಮಾಡಬಹುದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಕಬಾಬ್‌ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ ಅವಕಾಶವಿಲ್ಲ ಎಂದು ಆದೇಶದಲ್ಲಿ‌ ತಿಳಿಸಲಾಗಿದೆ. ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10.00 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.‌

7 ವರ್ಷಗಳಿಂದ ಜೀವಾವಧಿವರೆಗೆ ಜೈಲುಶಿಕ್ಷೆ: ವೆಜ್/ಚಿಕನ್/ಫಿಶ್ ಕಬಾಬ್ ತಯಾರಿಕೆಯಲ್ಲಿ ಕೃತಕ ಬಣ್ಣಗಳ ಬಳಕೆ ಮಾಡಲಾಗುತ್ತಿರುವುದು ಪ್ರಯೋಗಾಲಯಗಳ  ಮೂಲಕ ನಡೆಸಲಾದ ಪರೀಕ್ಷೆಯಿಂದ ದೃಢಪಟ್ಟಿದೆ. ಈ ಕೃತಕ ಬಣ್ಣಗಳು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವೆಜ್/ಚಿಕನ್/ಫಿಶ್ ಕಬಾಬ್ ತಯಾರಿಕೆ ವೇಳೆ ಕೃತಕ ಬಣ್ಣ ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.  ನಿಷೇಧದ ಆದೇಶ ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ಅಂತಹವರ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಅನ್ವಯ 7 ವರ್ಷಗಳಿಂದ ಜೀವಾವಧಿವರೆಗೆ ಜೈಲುಶಿಕ್ಷೆ ಹಾಗು 10 ಲಕ್ಷದವರೆಗೆ ದಂಡ ವಿಧಿಸಲು ಅವಕಾಶವಿದೆ. ರಾಜ್ಯದ ಎಲ್ಲಾ ಕಬಾಬ್ ತಯಾರಿಸುವ ಮತ್ತು ಮಾರಾಟ ಮಾಡುವ ಆಹಾರ ಉದ್ದಿಮೆದಾರರು ಈ ಆದೇಶವನ್ನು ತತ್‌ಕ್ಷಣದಿಂದಲೇ ಪಾಲಿಸಲು ಸೂಚಿಸಲಾಗಿದೆ.  

Previous Post

ಮಂಗಳೂರು ನಗರ ಆಯುಕ್ತರು ಗೂಂಡಾರಂತೆ ವರ್ತಿಸುತ್ತಿದ್ದಾರೆ: ರಿಯಾಜ್ ಕಡ0ಬು

Next Post

ಜಪಾನ್‌ ಅನ್ನು ಕಾಡುತ್ತಿದೆ ಮನುಷ್ಯನ ಮಾಂಸ ತಿನ್ನುವ ವೈರಸ್‌ 

Next Post
ಜಪಾನ್‌ ಅನ್ನು ಕಾಡುತ್ತಿದೆ ಮನುಷ್ಯನ ಮಾಂಸ ತಿನ್ನುವ ವೈರಸ್‌ 

ಜಪಾನ್‌ ಅನ್ನು ಕಾಡುತ್ತಿದೆ ಮನುಷ್ಯನ ಮಾಂಸ ತಿನ್ನುವ ವೈರಸ್‌ 

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.