ಮಳೆ ಬಾಧಿತ ಪಂದ್ಯದಲ್ಲಿ 19 ಓವರ್‌ಗಳಲ್ಲಿ 114 ರನ್ ಗುರಿ ಪಡೆದಿದ್ದ ಬಾಂಗ್ಲಾದೇಶ ತಂಡವು 105 ರನ್‌ಗಳಿಗೆ ಸರ್ವಪತನ ಕಂಡಿದೆ. ಈ ಗೆಲುವಿನೊಂದಿಗೆ ಗ್ರೂಪ್ 1ರಿಂದ ಎರಡನೇ ತಂಡವಾಗಿ ರಶೀದ್ ಖಾನ್ ಪಡೆ ಸೆಮೀಸ್‌ಗೇರಿದರೆ, ಆಸ್ಟ್ರೇಲಿಯಾ ತಂಡದ ಸೆಮೀಸ್ ಕನಸು ನುಚ್ಚುನೂರಾಯಿತು.
ಕಿಂಗ್ಸ್‌ಟೌನ್: ಕ್ರಿಕೆಟ್ ಅಭಿಮಾನಿಗಳನ್ನು ಅಕ್ಷರಶಃ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಆಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಸೂಪರ್ 8 ಹಂತದ ಕೊನೆಯ ಪಂದ್ಯದಲ್ಲಿ ಕೊನೆಗೂ 8 ರನ್ ರೋಚಕ ಗೆಲುವು ಸಾಧಿಸುವ ಮೂಲಕ ರೋಚಕವಾಗಿ ಸೆಮಿಫೈನಲ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ.

ಮಳೆ ಬಾಧಿತ ಪಂದ್ಯದಲ್ಲಿ 19 ಓವರ್‌ಗಳಲ್ಲಿ 114 ರನ್ ಗುರಿ ಪಡೆದಿದ್ದ ಬಾಂಗ್ಲಾದೇಶ ತಂಡವು 105 ರನ್‌ಗಳಿಗೆ ಸರ್ವಪತನ ಕಂಡಿದೆ. ಈ ಗೆಲುವಿನೊಂದಿಗೆ ಗ್ರೂಪ್ 1ರಿಂದ ಎರಡನೇ ತಂಡವಾಗಿ ರಶೀದ್ ಖಾನ್ ಪಡೆ ಸೆಮೀಸ್‌ಗೇರಿದರೆ, ಆಸ್ಟ್ರೇಲಿಯಾ ತಂಡದ ಸೆಮೀಸ್ ಕನಸು ನುಚ್ಚುನೂರಾಯಿತು


