ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಅಬ್ಬರ ಹಿನ್ನೆಲೆಯಲ್ಲಿ ಜುಲೈ 6 ರಂದು ಜಿಲ್ಲೆಯ ಕೆಲ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ರಿಂದ ಆದೇಶ ಹೊರಡಿಸಲಾಗಿದೆ. ಪದವಿ ಕಾಲೇಜು ಹೊರತುಪಡಿಸಿ ಉಳಿದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಉಡುಪಿ ಜಿಲ್ಲೆಯ ಎರಡು ತಾಲೂಕುಗಳಲ್ಲೂ ಸಹ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ, ಯಾವೆಲ್ಲಾ ತಾಲೂಕುಗಳಲ್ಲಿ ರಜೆ ನೀಡಲಾಗಿದೆ ಎನ್ನುವುದನ್ನು ತಿಳಿದುಕೊಳ್ಳಿ.

ಕಾರವಾರ, (ಜುಲೈ 05): ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ರಸ್ತೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ನಾಳೆ(ಜುಲೈ 06) ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಕುಮಟಾ, ಭಟ್ಕಳ, ಹೊನ್ನಾವರ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಹೊರಡಿಸಿದ್ದಾರೆ. ಆದ್ರೆ, ಶಿರಸಿ, ಸಿದ್ದಾಪುರ ಹಾಗೂ ಮುಂಡಗೋಡ ತಾಲೂಕಿನಲ್ಲಿ ಶಾಲಾ ಕಾಲೇಜ್ ಗೆ ರಜೆ ಇಲ್ಲ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ ಜಿಲ್ಲಾಡಳಿ ಕಾಳಜಿ ಕೇಂದ್ರಗಳಲ್ಲಿ ತೆರೆದಿದೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ 35 ಜನರ ಎರಡು NDRF ತಂಡ ಸಹ ಉತ್ತರ ಕನ್ನಡ ಜಿಲ್ಲೆಗೆ ಬಂದಿದೆ.

ಉಡುಪಿ ಜಿಲ್ಲೆಯಲ್ಲಿ ಎರಡು ತಾಲೂಕುಗಳಲ್ಲಿ ರಜೆ ಘೋಷಣೆ
ಇನ್ನು ಉಡುಪಿಯಲ್ಲೂ ಭಾರೀ ಮಳೆಯಾಗುತ್ತಿರುವುದುರಿಂದ ಮುಂಜಾಗ್ರತಾವಾಗಿ ಜಿಲ್ಲೆಯ ಎರಡು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದ್ರೆ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ ಎಂದು ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶ ಆದೇಶ ಹೊರಡಿಸಿದ್ದಾರೆ.
