ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ (ಜುಲೈ 9 ) ಜಿಲ್ಲಾದ್ಯಂತ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ

ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವ ಕಾರಣ ಮಳೆ ತೀವ್ರವಾದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸಂಪೂರ್ಣ ಜಿಲ್ಲೆಗೆ ಅನ್ವಯಿಸಿ ಸೋಮವಾರ ರಜೆ ಘೋಷಣೆ ಮಾಡಿದ್ದಾರೆ

ಭಾನುವಾರ ಸಂಜೆಯೊಂದಲೂ ಭಾರೀ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಸೋಮವಾರ ರಜೆ ಘೋಷಿಸಲಾಗಿತ್ತು.ತುರ್ತು ಸೇವೆಗೆ 24*7 ಕಂಟ್ರೋಲ್ ರೂಮ್ ಟೋಲ್ ಫ್ರೀ ದೂರವಾಣಿ ಸಂಖ್ಯೆ ಯನ್ನು 1077/ 0824-2442590 ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.
