ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಒಟ್ಟು 11 ಪ್ರಕರಣಗಳಲ್ಲಿ 9 ಜಿಲ್ಲೆಗಳ 56 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. ದಾಳಿಯಲ್ಲಿ ಸುಮಾರು 100ಕ್ಕೂ ಹೆಚ್ಚು ಅಧಿಕಾರಿಗಳು ಭಾಗಿಯಾಗಿದ್ದಾರೆ.

ಮಂಡ್ಯ
ಆದಾಯಕ್ಕೂ ಮೀರಿ ಆಸ್ತಿ ಸಂಪದಾನೆ ಆರೋಪ ಹಿನ್ನೆಲೆಯಲ್ಲಿ ನಿವೃತ್ತ ಇಇ ಶಿವರಾಜು ಎಸ್ ಮನೆ ಮೇಲೆ ದಾಳಿ ಮಾಡಲಾಗಿದೆ. ಮಂಡ್ಯ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಮಂಡ್ಯ ಹಾಗೂ ಮೈಸೂರಿನಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಾಗಮಂಗಲದ ಇಜ್ಜಲಘಟ್ಟದಲ್ಲಿ ಮೂರು ಕಡೆ ಹಾಗೂ ಮೈಸೂರಿನಲ್ಲಿ ಎರಡು ಕಡೆ ದಾಳಿ ಮಾಡಲಾಗಿದೆ. ಇಜ್ಜಲಘಟ್ಟದಲ್ಲಿರುವ ಫಾರ್ಮ್ ಹೌಸ್, ತಂದೆ ಮನೆ, ಕ್ರಷರ್ ಮೇಲೆ ದಾಳಿ ಮಾಡಲಾಗಿದೆ. ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

ಹಾಸನ
ಹಾಸನದಲ್ಲೂ ಲೋಕಾಯುಕ್ತ ದಾಳಿಯಾಗಿದೆ. ಗ್ರೇಡ್ 1 ಕಾರ್ಯದರ್ಶಿ ಎನ್.ಎಂ.ಜಗದೀಶ್ ನಿವಾಸ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇವರಿಗೆ ಸೇರಿದ ಬೆಂಗಳೂರು ನಿವಾಸದ ಮೇಲೂ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ.

ಚಿತ್ರದುರ್ಗ
ಚಿತ್ರದುರ್ಗದಲ್ಲಿ ನಿವೃತ್ತ ಸುಪರಿಡೆಂಟ್ ಇಂಜಿನಿಯರ್ ಎಂ.ರವಿಂದ್ರಪ್ಪ ಮೇಲೆ ದಾಳಿಯಾಗಿದೆ. PWD ಇಲಾಖೆಯ ನಿವೃತ್ತ ಇಂಜಿನಿಯರ್ ಆಗಿರುವ ರವೀಂದ್ರಪ್ಪಗೆ ಸೇರಿದ ವಿನಾಯಕ ಬಡಾವಣೆಯಲ್ಲಿರುವ ಮನೆ, ಐಮಂಗಲ ಬಳಿಯಿರುವ ಫ್ಯಾಕ್ಟರಿ ಮೇಲೆ ರೇಡ್ ಮಾಡಲಾಗಿದೆ. ಎರಡು ಕಾರಿನಲ್ಲಿ ಬಂದಿರುವ ಲೋಕಾಯುಕ್ತ ಅಧಿಕಾರಿಗಳು ತೀವ್ರ ಶೋದ ನಡೆಸುತ್ತಿದ್ದಾರೆ
ಬೆಳಗಾವಿ
ಬೆಳಗಾವಿಯಲ್ಲಿ ಜಿಪಂ ಎಇಇ ಮೇಲೆ ಮಹಾದೇವ ಬನ್ನೂರ ಮನೆ ಮೇಲೆ ದಾಳಿಯಾಗಿದೆ. ಬೆಳಗಾವಿ ತಾಲೂಕಿನ ಯಳ್ಳೂರ ಹೊರವಲಯದಲ್ಲಿರುವ ಬನ್ನೂರ ಮನೆಗೆ ದಿಢೀರ್ ದಾಳಿ ನಡೆಸಿ ಶೋಧಕಾರ್ಯ ನಡೆಸ್ತಿದ್ದಾರೆ. ಈ ಹಿಂದೆ ಮಹಾದೇವ ಬನ್ನೂರ ಮೇಲೆ ಲೋಕಾ ಅಧಿಕಾರಿಗಳು ದಾಳಿ ಮಾಡಿದ್ದರು. ಆಗ ಮನೆಯಲ್ಲಿ ಅಕ್ರಮವಾಗಿ ಇಟ್ಕೊಂಡಿದ್ದ 27 ಲಕ್ಷ ರೂಪಾಯಿ ಪತ್ತೆಯಾಗಿತ್ತು. ಲೋಕಾಯುಕ್ತ ಡಿವೈಎಸ್ಪಿ ಭರತ್ ರೆಡ್ಡಿ ನೇತೃತ್ವದ ದಾಳಿಯಾಗಿದೆ.
ಕಲಬುರಗಿ
ಕಲಬುರಗಿಯಲ್ಲೂ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದೆ. ಬಿಬಿಎಂಪಿ ಕೆಂಗೇರಿ ವಿಭಾಗದ ಕಂದಾಯ ಅಧಿಕಾರಿ ಬಸವರಾಜ ಮಾಗಿ ಮನೆ ಮೇಲೆ ದಾಳಿ ನಡೆಸಿ ಶೋಧಕಾರ್ಯ ನಡೆಸುತ್ತಿದ್ದಾರೆ. ಕಲಬುರಗಿ ನಗರದ ಎಂ.ಬಿ ನಗರದಲ್ಲಿರುವ ಬಸವರಾಜ ಮಾಗಿ ಮನೆ ಇದೆ. ಇವರು ಮೂಲತಃ ಕಲಬುರಗಿ ತಾಲೂಕಿನ ಪಾಳಾ ಗ್ರಾಮದವರು
