ಬಂಟ್ವಾಳ: ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಬಂಟ್ವಾಳ ತಾಲೂಕಿನ ನದಿ ತೀರದ ಸಾಕಷ್ಟು ಮನೆಗಳು ಮುಳುಗಡೆಯಾಗಿದೆ. ತಾಲೂಕಿನ ಪಾಣೆಮಂಗಳೂರು, ಬಂಟ್ವಾಳ, ನಾವೂರು, ಸರಪಾಡಿ, ಮಣಿನಾಲ್ಕೂರು ಗ್ರಾಮಗಳಲ್ಲಿ ಕೃಷಿ ತೋಟಗಳು, ಗದ್ದೆಗಳು ಮುಳುಗಡೆಯಾಗಿದೆ.

ಬಂಟ್ವಾಳ- ಜಕ್ರಿಬೆಟ್ಟು ರಸ್ತೆಯ ಕೋಟೆಕಣಿ, ಬಿ.ಸಿ.ರೋಡಿನ ಬಸ್ತಿಪಡ್ಪು, ಆಲಡ್ಕ ಪ್ರದೇಶ ಮೊದಲಾದ ಪ್ರದೇಶದಲ್ಲಿ ರಸ್ತೆಗೆ ನೀರು ಬಿದ್ದು ಸಂಚಾರ ಕಡಿತಗೊಂಡಿದೆ.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.


