ಬೆಂಗಳೂರು: ವಯನಾಡು ಸಂತ್ರಸ್ತರಿಗೆ (Wayanad Landslides) 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕರ್ನಾಟಕ ಸರ್ಕಾರ (Karnataka Government) ಘೋಷಿಸಿದೆ.
ಸಿಎಂ ಸಿದ್ದರಾಮಯ್ಯನವರು (CM Siddaramaiah) ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಈ ಮಹತ್ವದ ನಿರ್ಧಾರ ತಿಳಿಸಿದ್ದಾರೆ

ಪೋಸ್ಟ್‌ನಲ್ಲಿ ಏನಿದೆ?
ವಯನಾಡಿನಲ್ಲಿ ಸಂಭವಿಸಿದ ದುರಂತ ಭೂಕುಸಿತದ ಬೆಳಕಿನಲ್ಲಿ, ಕರ್ನಾಟಕವು ಕೇರಳದೊಂದಿಗೆ (Kerala) ಒಗ್ಗಟ್ಟಿನಿಂದ ನಿಂತಿದೆ. ನಾನು ಕೇರಳ ಸಿಎಂ ಪಿಣರಾಯಿ ವಿಜಯನ್ ಜೊತೆ ಮಾತನಾಡಿ ಬೆಂಬಲ ವ್ಯಕ್ತಪಡಿಸಿದ್ದೇನೆ. ಕರ್ನಾಟಕವು ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿ ಕೊಡಲಿದೆ. ಒಟ್ಟಾಗಿ ನಾವು ಪುನರ್ ನಿರ್ಮಾಣ ಮಾಡುತ್ತೇವೆ ಮತ್ತು ಭರವಸೆಯನ್ನು ಪುನಃಸ್ಥಾಪಿಸುತ್ತೇವೆ.



