ಮಂಗಳೂರು : ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಕಡಪ್ಪರ ಸಮೀರ್ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ.
ತನ್ನ ತಾಯಿಯೊಂದಿಗೆ ಕಲ್ಲಾಪು ಬಳಿ ಹೋಟೆಲ್ಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದಿದ್ದ ತಂಡ ಹತ್ಯೆಗೈದು ಪರಾರಿಯಾಗಿದೆ.

ಮೃತ ಸಮೀರ್ ಎರಡು ದಿನಗಳ ಹಿಂದಷ್ಟೇ ಜಾಮೀನಿನ ಮೂಲಕ ಹೊರಬಂದಿದ್ದ ಎಂದು ತಿಳಿದು ಬಂದಿದೆ.
ಘಟನಾ ನಡೆದ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.


