ರಾಜಸ್ಥಾನದ ಉದಯಪುರದ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬನ ಮೇಲೆ ಇನ್ನೋರ್ವ ಬಾಲಕ ಚಾಕುವಿನಿಂದ ಇರಿದಿದ್ದ. ಈ ಘಟನೆ ರಾಜಸ್ಥಾನದಲ್ಲಿ ಕೋಮುಗಲಭೆಗೆ ಕಾರಣವಾಗಿತ್ತು. ಇದರಿಂದ ರಾಜ್ಯಾದ್ಯಂತ ಪ್ರತಿಭಟನೆ ಹೆಚ್ಚಾಗಿ, ಹಿಂಸಾಚಾರಕ್ಕೆ ತಿರುಗಿತ್ತು. ಇದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿನಿ ಗೆ ಸಹಪಾಠಿ ವಿದ್ಯಾರ್ಥಿ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ.

ಮಂಗಳೂರು, (ಆಗಸ್ಟ್ 20): ಮುಸ್ಲಿಂ ವಿದ್ಯಾರ್ಥಿನಿಗೆ ಸಹಪಾಠಿ ವಿದ್ಯಾರ್ಥಿಯೋರ್ವ ಚಾಕುವಿನಿಂದ ಇರಿದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ. ಹಿಂದೂ ವಿದ್ಯಾರ್ಥಿಯೋರ್ವ ಮುಸ್ಲಿಂ ವಿದ್ಯಾರ್ಥಿನಿಯ ಕೈಗೆ ಚಾಕುವಿನಿಂದ ಇರಿದಿದ್ದಾನೆ. ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಸೇರಿದ ವಿದ್ಯಾರ್ಥಿಗಳು. ಸದ್ಯ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಇತ್ತ ಚಾಕುವಿನಿಂದ ಇರಿದಿದ್ದ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನು ಹೆಸರು ಬದಲಾಯಿಸಿ ಹೇಳುವಂತೆ ಶಿಕ್ಷಕಿ ಒತ್ತಡ ಹೇರಿದ್ದಾರೆ ಎಂದು ಹಲ್ಲೆಗೊಳಗಾದ ಬಾಲಕಿ ಗಂಭೀರ ಆರೋಪ ಮಾಡಿದ್ದಾಳೆ. ಚಾಕುವಿನಿಂದ ಇರಿದಿದ್ದು ಎಂದು ಹೇಳಬೇಡ ಬದಲಿಗೆ ಕೈಗೆ ಗಾಜು ತಾಗಿ ಗಾಯವಾಗಿದೆ ಎಂದು ಹೇಳುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪ ಕೇಳಿಬಂದಿದ್ದು, ಸದ್ಯ ಆಸ್ಪತ್ರೆಯ ಮುಂದೆ ಜನ ಸೇರಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಗೆ ಪುತ್ತೂರು ಟೌನ್ ಠಾಣೆ ಪೊಲೀಸರು ದೌಡಾಯಿಸಿದ್ದು, ಜನರ ಮನವೊಲಿಸಿ ಆಸ್ಪತ್ರೆ ಆವರಣದಿಂದ ಹೊರಗೆ ಕಳುಹಿಸಿದ್ದಾರೆ. ಆದ್ರೆ, ಏಕೆ ಚಾಕುವಿನಿಂದ ಇರಿದಿದ್ದು ಯಾಕೆ? ಎನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

–