ಕೋಲಾರ: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ (Muniratna) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ಕೋಲಾರದ (Kolar) ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಶನಿವಾರ ಸಂಜೆ ಶಾಸಕರನ್ನು ವಶಕ್ಕೆ ಪಡೆಯಲಾಗಿದೆ. ಕೋಲಾರ ಮಾರ್ಗವಾಗಿ ಆಂಧ್ರಪ್ರದೇಶಕ್ಕೆ ಮುನಿರತ್ನ ಅವರು ತೆರಳುತ್ತಿದ್ದಾಗ ಬೆಂಗಳೂರು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಶಾಸಕರನ್ನು ವಶಕ್ಕೆ ಪಡೆದು ಪೊಲೀಸರು ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.

ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ: ಶಾಸಕ ಮುನಿರತ್ನಗೆ ಬಿಜೆಪಿ ಶೋಕಾಸ್ ನೋಟಿಸ್
ಜೀವ ಬೆದರಿಕೆ, ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೊನೆಗೂ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಐದು ದಿನಗಳ ಒಳಗಾಗಿ ಸ್ಪಷ್ಠೀಕರಣ ನೀಡುವಂತೆ ನೋಟಿಸ್ ನೀಡಲಾಗಿದೆ.
ಬೆಂಗಳೂರು, ಸೆಪ್ಟೆಂಬರ್ 14: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನಮತ್ತು ಗುತ್ತಿಗೆದಾರ ಚಲುವರಾಜು ಅವರದ್ದು ಎನ್ನಲಾದ ಆಡಿಯೋ ಈಗ ಮುನಿರತ್ನಗೆ ಸಂಕಷ್ಟ ತಂದೊಡ್ಡಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಶಾಸಕ ಮುನಿರತ್ನಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.

ಆಂಧ್ರಪ್ರದೇಶಕ್ಕೆ ಪರಾರಿಯಾಗುತ್ತಿದ್ದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಬೆದರಿಕೆ, ಜಾತಿನಿಂದನೆ ಆರೋಪ ಹಿನ್ನೆಲೆ ವೈಯಾಲಿಕಾವ್ ಠಾಣೆಯಲ್ಲಿ ಎರಡು ಎಫ್ ಐಆರ್ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಮುನಿರತ್ನ ಅವರನ್ನು ಬಂಧಿಸಲಾಗಿದೆ.
ಕೋಲಾರ ಪೊಲೀಸರ ನೆರವಿನೊಂದಿಗೆ ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಶಾಸಕ ಮುನಿರತ್ನ ಬಂಧನವಾಗಿದೆ. ಕೋಲಾರ ಮಾರ್ಗವಾಗಿ ಆಂದ್ರಪ್ರದೇಶಕ್ಕೆ ತೆರಳುತ್ತಿದ್ದ ವೇಳೆ ಬೆಂಗಳೂರು ಪೊಲೀಸರು ಚೇಸ್ ಮಾಡಿ ಬಂಧಿಸಿದ್ದಾರೆ. ಕೋಲಾರ ಎಸ್ಪಿ ನಿಖಿಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಎಸ್ಕೇಪ್ ಆಗಲು ಬೇಸಿಕ್ ಮೊಬೈಲ್ ಖರೀದಿಸಿದ್ದ ಮುನಿರತ್ನ ಹೊಸ ನಂಬರ್ ಉಪಯೋಗಿಸಿ ತಪ್ಪಿಸಿಕೊಳ್ಳೊ ಪ್ರಯತ್ನ ಮಾಡಿದ್ದರು. ಎರಡು ಬೇಸಿಕ್ ಮೊಬೈಲ್ ಪಡೆದು ಕೋಲಾರ ಮಾರ್ಗವಾಗಿ ಆಂಧ್ರಪ್ರದೇಶಕ್ಕೆ ಹೊರಟಿದ್ದರು. ಪೊಲೀಸರಿಗೆ ಲೊಕೇಶನ್ ಸಿಗಬಾರದು ಅಂತ ಬೇಸಿಕ್ ಮೊಬೈಲ್ ಬಳಕೆ ಮಾಡಿ ಎಸ್ಕೇಪ್ ಆಗಲು ಮುನಿರತ್ನ ಪ್ರಯತ್ನಿಸಿದ್ದು, ಈಗ ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆದತಂದಿದ್ದಾರೆ.
ಆಡಿಯೋದಲ್ಲಿ ಏನಿದೆ?: ಮುನಿರತ್ನ ಅವರದ್ದು ಎನ್ನುವ ವೈರಲ್ ಆದ ಆಡಿಯೋದಲ್ಲಿ ನಿರ್ದಿಷ್ಟ ಸಮುದಾಯದ ಜಾತಿ ನಿಂದನೆ ಮಾಡಲಾಗಿದೆ. ಅಶ್ಲೀಲವಾದ ಪದಗಳನ್ನು ಬಳಕೆ ಮಾಡಲಾಗಿದೆ. ಮಾತ್ರವಲ್ಲ ಚಲವರಾಜು ಅವರ ಕುಟುಂಬದ ಹೆಣ್ಣಮಕ್ಕಳ ಕುರಿತಾಗಿಯೂ ಕೆಟ್ಟ ಬೈಗುಳದ ಮಾತುಗಳು ಇದೆ. *** ಅಂತಹ ಜಾತಿಗೆ ಸೇರಿದವನೊಂದಿಗೆ ಯಾಕೆ ಹೋಗ್ತೀಯಾ ಎಂದು ನಿಂದನೆ ಮಾತ್ರವಲ್ಲದೆ. ಹಣ ತೆಗೆದುಕೊಂಡು ಬರೋದಾದ್ರೆ ಬಾ, ನಾನು 5 ವರ್ಷ ಎಂಎಲ್‌ಎ ಆಗಿರ್ತೀನಿ, ಅಲ್ಲಿಯವರೆಗೂ ಯಾರು ಏನೂ ಮಾಡೋಕಾಗಲ್ಲ. ಬೇರೆ ಎಲ್ಲಾದರೂ ನಿನ್ನನ್ನು ಸಿಕ್ಕಿ ಹಾಕಿಸ್ತೀನಿ ” ಎಂಬ ಮಾತುಗಳು ಆಡಿಯೊದಲ್ಲಿದೆ.
ನಾಲ್ವರ ವಿರುದ್ಧ ಪ್ರಕರಣ: ಘಟನೆ ಸಂಬಂಧ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಘನತ್ಯಾಜ್ಯ ವಿಲೇವಾರಿ ಗುತ್ತಿಗೆ ನೀಡಲು ಲಂಚಕ್ಕೆ ಬೇಡಿಕೆ, ಕೊಲೆ ಬೆದರಿಕೆ, ಜಾತಿ ನಿಂದನೆ, ಮಹಿಳೆಯರ ವಿರುದ್ದ ಅಶ್ಲೀಲ ಭಾಷೆ ಬಳಕೆ ಮಾಡಿರುವ ಆರೋಪದಡಿ ಮುನಿರತ್ನ ಜೊತೆಗೆ ಅವರ ಸಹಾಯಕರಾದ ವಿಜಿ ಕುಮಾರ್, ಅವರ ಭದ್ರತಾ ಸಿಬ್ಬಂದಿ ಅಭಿಷೇಕ್ ಹಾಗೂ ವಸಂತ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.