ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಅವರ ಸಹೋದರ, ಉದ್ಯಮಿ ಬಿ.ಎಂ. ಮುಮ್ತಾಜ್ ಅಲಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು (ಸೆ.8): ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಅವರ ಸಹೋದರ, ಉದ್ಯಮಿ ಬಿ.ಎಂ. ಮುಮ್ತಾಜ್ ಅಲಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿ ಪ್ರಕರಣದ A1 ಆರೋಪಿ ಆಯಿಷಾ @ ರೆಹಮತ್ ಸಹಿತ ಮೂವರನ್ನು ಬಂಧಿಸಲಾಗಿದೆ. ಆರೋಪಿಗಳು ಕೇರಳಕ್ಕೆ ಪರಾರಿಯಾಗಿದ್ದರು. ರೆಹಮತ್ ಪತಿ ಹಾಗು ಪ್ರಕರಣದ A5 ಆರೋಪಿ ಶೊಹೇಬ್ ಮತ್ತು ಸಿರಾಜ್ ಬಂಧನವಾಗಿದೆ. ಬಂಟ್ವಾಳದ ಕಲ್ಲಡ್ಕ ಬಳಿ ರೆಹಮತ್ ಳನ್ನು ಬಂಧಿಸಿದ್ದಾರೆ.

ಪ್ರಕರಣ ಪ್ರಮುಖ ಮಾಸ್ಟರ್ ಮೈಂಡ್ A2 ಆರೋಪಿ ಅಬ್ದುಲ್ ಸತ್ತಾರ್ ಗಾಗಿ ಶೋಧ ಕಾರ್ಯಮುಂದುವರೆದಿದೆ. ಘಟನೆಗೆ ಸಂಬಂಧಿಸಿದಂತೆ 6 ಜನರ ಮೇಲೆ ಕಾವೂರು ಠಾಣೆಯಲ್ಲಿ ಎಫ ಐ ಆರ್ ದಾಖಲಾಗಿದೆ. ಸದ್ಯ ಮಹಿಳೆ ರೆಹಮತ್, ಆಕೆಯ ಪತಿ ಶೋಹೆಬ್ ಹಾಗೂ ಸಿರಾಜ್ ಬಂಧನವಾಗಿದೆ.
