
ಮಂಗಳೂರು: ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಸೈನಿಕರ ಬಲಿದಾನವನ್ನು ತನ್ನ ಸ್ವಾಥ ಸಾಧನೆಗೆ ಬಳಿಸಿಕೊಂಡ ಅರ್ನಬ್ ಗೋಸ್ವಾಮಿ ವಿರುದ್ಧ ಇಂದು ಮಂಗಳೂರಿನಲ್ಲಿ ಎಸ್‍ಡಿಪಿಐ ಪ್ರತಿಭಟನೆಯನ್ನು ನಡೆಸಿತು.
ಮಂಗಳೂರಿನ ಮಿನಿ ವಿಧಾನ ಸೌಧದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಎಸ್‍ಡಿಪಿಐ ಕಾರ್ಯಕರ್ತರು ಅರ್ನಬ್ ಗೋಸ್ವಾಮಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಅರ್ನಬ್‍ನ ಇಂತಹ ಕೃತ್ಯಗಳಿಂದ ರಾಷ್ಟ್ರೀಯ ಭದ್ರತೆಗೆ ಅಪಾವಿದ್ದು, ಆತನನ್ನು ಕೂಡಲೇ ಬಂಧಿಸಬೇಕೆಂದು ಪ್ರತಿಭಟನಕಾರರು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಎಸ್‍ಡಿಪಿಐ ಜಿಲ್ಲಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ತನ್ನ ಪತ್ರಿಕಾಧರ್ಮವನ್ನು ಮರೆತು, ಆತ್ಮಸಾಕ್ಷಿಯನ್ನು ಬಿಜೆಪಿಗೆ ಮಾರಿಕೊಂಡಿರುವ ಅರ್ನಬ್ ಅವರ ವಾಟ್ಸಪ್ ಚಾಟ್‍ಗಳು ದೇಶದ ಭದ್ರತೆಗೆ ಅಪಾಯಕಾರಿಯಾಗಿದೆ. ಇಂತಹ ವ್ಯಕ್ತಿಯನ್ನು ಕೂಡಲೇ ಬಂಧಿಸಿ ಸೂಕ್ತ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು.