ಮಂಗಳೂರು: ಬೀದರ್ ಹಾಗೂ ತೆಲಂಗಾಣದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, 44.630 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ತೌಡುಗೋಳಿ ಕ್ರಾಸ್ ನಿವಾಸಿ ಅಬ್ದುಲ್ ಅಝೀಝ್ ಯಾನೆ ಪೋಕರ್ ಅಝೀಝ್(40), ಮೊಯ್ದಿನ್ ಹಫೀಝ್ ಯಾನೆ ಅಬಿ(24), ತೆಲಂಗಾಣದ ವಿಠಲ ಚೌಹಾಣ್(35), ಬೀದರ್ ನ ಸಂಜುಕುಮಾರ್ ಯಾನೆ ಸಂಜು(34), ಕಲ್ಲಪ್ಪ(40), ಬಂಟ್ವಾಳದ ಮುಹಮ್ಮದ್ ಹಫೀಝ್ ಯಾನೆ ಅಪ್ಪಿ(23) ಹಾಗೂ ಸಂದೀಪ್(34) ಬಂಧಿತ ಆರೋಪಿಗಳು.
ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಉಳ್ಳಾಲ ಮತ್ತು ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿ ಎರಡು ಕಾರು, ದ್ವಿಚಕ್ರ ವಾಹನ, ಮೊಬೈಲ್ ಫೋನ್ ಹಾಗೂ 44.630 ಕೆಜಿ ಗಾಂಜಾವನ್ನು ವಶಕ್ಕೆ ಪಡೆದು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಬಗ್ಗೆ ಉಳ್ಳಾಲ ಹಾಗೂ ಕೊಣಾಜೆ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.
