ತಿರುವನಂತಪುರಂ: ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಸ್ಪರ್ಧಿಸಿರೋ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರ ಬರೋಬ್ಬರಿ 2 ಲಕ್ಷಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಇಷ್ಟು ದಿನಗಳ ಕಾಲ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಪ್ರಿಯಾಂಕ ಗಾಂಧಿ ಕೊನೆಗೂ ಚುನಾವಣಾ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಅಷ್ಟೇ ಅಲ್ಲ ಮೊದಲ ಚುನಾಣೆಯಲ್ಲೇ ಗೆಲ್ಲುವ ಭರವಸೆ ಹೊಂದಿದ್ದಾರೆ.

3 ಲಕ್ಷ ಮತಗಳಿಂದ ಗೆದ್ದಿದ್ದ ರಾಹುಲ್
ಈ ಹಿಂದೆ 2024ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವ್ರು ರಾಯ್ ಬರೇಲಿ ಮತ್ತು ವಯನಾಡು ಕ್ಷೇತ್ರಗಳಲ್ಲಿ ಗೆದ್ದು ಬೀಗಿದ್ರು. ರಾಹುಲ್ ಗಾಂಧಿ ಕಾಂಗ್ರೆಸ್ ವರಿಷ್ಠರಾದ ಕಾರಣ ವಯನಾಡು ಕ್ಷೇತ್ರ ಉಳಿಸಿಕೊಳ್ಳುವ ಜತೆಗೆ ಪಕ್ಷದ ಭದ್ರಕೋಟೆಯಾದ ರಾಯ್ ಬರೇಲಿಯನ್ನು ಭದ್ರಪಡಿಸಿಕೊಳ್ಳೋ ಜವಾಬ್ದಾರಿ ಇತ್ತು. ಎರಡೂ ಕ್ಷೇತ್ರಗಳಲ್ಲೂ ಗೆದ್ದ ರಾಹುಲ್ ಗಾಂಧಿ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ರು. ಇನ್ನೂ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿ ಮೂರು ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ರು.


2019ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಲ್ಲಿ ಸ್ಮೃತಿ ಇರಾನಿ ಎದುರು ಸೋತಿದ್ದ ರಾಹುಲ್ ಗಾಂಧಿ, ವಯನಾಡ್ ಕ್ಷೇತ್ರದಿಂದ ಗೆದ್ದು ಸಂಸದರಾಗಿದ್ದರು. 2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ವಯನಾಡ್ ಮತ್ತು ರಾಯ್ ಬರೇಲಿ ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸಿ ಭಾರಿ ಮತಗಳ ಅಂತರದಿಂದ ಗೆದ್ದಿದ್ದರು. ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಪ್ರವೇಶಿಸಿದ್ದರಿಂದ ರಾಯ್ ಬರೇಲಿ ಕ್ಷೇತ್ರ ಉಳಿಸಿಕೊಂಡ ರಾಹುಲ್ ಗಾಂಧಿ, ವಯನಾಡ್ ಕ್ಷೇತ್ರವನ್ನು ಸಹೋದರಿಗೆ ಬಿಟ್ಟುಕೊಟ್ಟರು.
ಕಳೆದ ಒಂದು ತಿಂಗಳಿಂದ ಪ್ರಿಯಾಂಕಾ ಪರ ಪ್ರಚಾರ ನಡೆಸಿದ್ದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು 5 ಲಕ್ಷಕ್ಕೂ ಹೆಚ್ಚು ಅಂತರದಿಂದ ಪ್ರಿಯಾಂಕಾ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದ್ದರು