
ಬ್ರಹ್ಮಾವರ, ಫೆ.1: ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರು ಸೇತುವೆಗೆ ಜ.31ರಂದು ರಾತ್ರಿ ವೇಳೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಆಸೀಫ್(19) ಮೃತ ಸ್ಕೂಟರ್ ಸವಾರ. ಇವರು ಸಂತೆಕಟ್ಟೆ ಕಡೆಯಿಂದ ಬ್ರಹ್ಮಾವರ ಕಡೆಗೆ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿದ ಸ್ಕೂಟರ್ ಸೇತುವೆಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಆಸೀಫ್ ಸ್ಥಳದಲ್ಲಿಯೇ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ