Mangaluru Kotekar Bank Robbery Case: ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಮಂಗಳೂರು ಪೊಲೀಸರು ನಿರಂತರ ಕಾರ್ಯಚರಣೆ ನಡೆಸಿ ಮೂವರು ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬ್ಯಾಂಕ್ ಕಳ್ಳರದ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ

ಮಂಗಳೂರು, (ಜನವರಿ 20): ಭಾರೀ ಸದ್ದು ಮಾಡಿದ್ದ ಉಲ್ಲಾಳದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬ್ಯಾಂಕ್ನಲ್ಲಿ ಸುಮಾರು 10ರಿಂದ 12 ಕೋಟಿಯನ್ನು ದರೋಡೆ ಮಾಡಿದ ಬಳಿಕ ಆರೋಪಿಗಳು ತಿರುವನ್ವೇಲಿಗೆ ಪರಾರಿಯಾಗಿದ್ದರು. ಇದೀಗ ಮಂಗಳೂರು ಪೊಲೀಸರು ಕಾರ್ಯಚರಣೆ ನಡೆಸಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಖುದ್ದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಖಚಿತಪಡಿಸಿದ್ದಾರೆ.

ದರೋಡೆಕೋರರ ಬಂಧನದ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದು, ತಮಿಳುನಾಡಿನ ವಿವಿಧ ಪ್ರದೇಶದಲ್ಲಿ ಮೂವರು ಆರೋಪಿಗಳ ಬಂಧನವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕು ಕೆ.ಸಿ.ರೋಡ್‌ನ ಶಾಖೆಯಲ್ಲಿ ಜನವರಿ 17ರಂದು ಕೋಟೆಕಾರು ಬ್ಯಾಂಕ್ನಲ್ಲಿ ದರೋಡೆ ಮಾಡಿದ್ದರು. ಮಹಾರಾಷ್ಟ್ರದ ಕಾರು ಬಳಸಿ ಕೋಟೆಕಾರು ಬ್ಯಾಂಕ್ನಲ್ಲಿ ಕೃತ್ಯವೆಸಗಿದ್ದರು. ಬ್ಯಾಂಕ್ ದರೋಡೆ ಬಳಿಕ ತಮಿಳುನಾಡಿನ ತಿರುನೆಲ್ವೇಲಿಗೆ ಪರಾರಿ ಆಗಿದ್ದರು. ಬಂಧಿತರಿಂದ 2 ಗೋಣಿಚೀಲ, ತಲ್ವಾರ್, 2 ಪಿಸ್ತೂಲ್ ಜಪ್ತಿ ಮಾಡಿದ್ದೇವೆ. ಬಂಧಿತ ಆರೋಪಿಗಳು ತಮಿಳುನಾಡಿನ ತಿರುನೆಲ್ವೇಲಿ ಮೂಲದವರು ಎಂದು ಸ್ಪಷ್ಟಪಡಿಸಿದ್ದಾರೆ

ತಮಿಳುನಾಡಿನ ಮಧುರೈ ಬಳಿ ಬಂಧಿಸಿದ್ದು, ದರೋಡೆಕೋರರನ್ನ ಮುಂಬೈನ ಧಾರಾವಿ ಮೂಲದ ಮುರುಗಂಡಿ ದೇವರ್, ಪ್ರಕಾಶ್ ಅಲಿಯಾಸ್ ಜೋಶ್ವಾ, ಮನಿವೆನನ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಫಿಯಟ್ ಕಾರು ಹಾಗೂ 2 ಗೋಣಿ ಚೀಲವನ್ನ ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪ್‌ಕುಮಾರ್ ಹೇಳಿದ್ದಾರೆ.