ಮುಂಬೈ: ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಬುಧವಾರ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಹರಿದು ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ.
ಘಟನೆ ಹೇಗಾಯ್ತು?
ಮೊದಲು ಪುಷ್ಪಕ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಿಸಿ ಗಾಳಿ ಕಾಣಿಸಿದೆ. ಈ ಬಿಸಿಗಾಳಿಯನ್ನೇ ಪ್ರಯಾಣಿಕರು ಬೆಂಕಿ ಎಂದು ಭಾವಿಸಿ ಕೆಳಕ್ಕೆ ಜಿಗಿದಿದ್ದಾರೆ.

ಕೆಳಕ್ಕೆ ಜಿಗಿಯುವ ಸಮಯದಲ್ಲಿ ಮತ್ತೊಂದು ಹಳಿಯಲ್ಲಿ ಕರ್ನಾಟಕ ಎಕ್ಸ್‌ಪ್ರೆಸ್ ಬಂದಿದ್ದು ಹಳಿಯಲ್ಲಿದ್ದ ಪ್ರಯಾಣಿಕರ ಮೇಲೆ ಹರಿದಿದೆ. ಇದರಿಂದಾಗಿ ಸಾವು ನೋವು ಜಾಸ್ತಿಯಾಗಿದೆ.
ದೆಹಲಿಯಿಂದ ಬೆಂಗಳೂರಿಗೆ ಕರ್ನಾಟಕ ಎಕ್ಸ್‌ಪ್ರೆಸ್ ಬರುತ್ತಿದ್ದರೆ, ಪುಷ್ಪಕ್ ಎಕ್ಸ್‌ಪ್ರೆಸ್ ಲಕ್ನೋದಿಂದ ಮುಂಬೈಗೆ ಬರುತ್ತಿತ್ತು
