ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಪ್ರಕರಣದ ಕುರಿತು ವಿಡಿಯೊ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂಡಿ ಅವರು ವಿರುದ್ಧ ಬಳ್ಳಾರಿ ಜಿಲ್ಲೆಯ ಕೌಲ್‌ಬಝಾರ್ ಪೊಲೀಸ್ ಠಾಣೆಯ ಪೊಲೀಸರು ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಪ್ರಕರಣದ ಬಗ್ಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

“ಸಮೀರ್ ಅವರ ವೀಡಿಯೋದಿಂದ ಧರ್ಮಸ್ಥಳ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿ ಮೇಲೆ ಧಾರ್ಮಿಕ ಭಾವನೆ ಹೊಂದಿದ ಸಾರ್ವಜನಿಕರ ಧಾರ್ಮಿಕ ಭಾವನೆಗೆ ದಕ್ಕೆಯಾಗಿದೆ” ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಈ ಪ್ರಕರಣದಲ್ಲಿ ಸಮೀರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅವರನ್ನು ಅರೆಸ್ಟ್ ಮಾಡುವಂತಿಲ್ಲ ಹಾಗೂ ಪೊಲೀಸ್ ಠಾಣೆಗೂ ಕರೆಯುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಇಂದು ಆದೇಶಿಸಿದೆ. ಜೊತೆಗೆ ಕಾನೂನು ಉಲ್ಲಂಘಸಿ ಪೂಲೀಸರು ನೋಟಿಸ್ ಕೊಟ್ಟಿದ್ದಾರೆ ಎಂದು ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ.

ಈ ಬಗ್ಗೆ ಮಾಜಿ ಪಿಎಸ್ಐ ಗಿರೀಶ್ ಮಟ್ಟಣ್ಣನವರ್ ತಮ್ಮ ಪೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿದ್ದಾರೆ.
ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ಎಂ.ಡಿ. ವಿಡಿಯೋ ಮಾಡಿದ್ದರು, ಇದು ಸಾಮಾಜಿಕ ಜಾಣತಾಣಗಳಲ್ಲಿ ಭಾರೀ ವೈರಲ್ ಆಗುವ ಮೂಲಕ ಸೌಜನ್ಯ ಪ್ರಕರಣವನ್ನು ಮತ್ತೆ ಮುನ್ನೆಲೆಗೆ ಬರುವಂತೆ ಮಾಡಿತ್ತು.

ಈ ಬಗ್ಗೆ ಪರ ವಿರೋಧ ಚರ್ಚೆಗಳು ಹೆಚ್ಚಾಗಿ ಸಮೀರ್ ವಿರುದ್ಧ ಬಳ್ಳಾರಿ ಜಿಲ್ಲೆಯ ಕೌಲ್‌ಬಝಾರ್ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು.

ಸಮೀರ್ ಅವರು ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಇತ್ತೀಚೆಗೆ ಮಾಡಿದ್ದ ವೀಡಿಯೊವೊಂದು ವ್ಯಾಪಕ ಗಮನ ಸೆಳೆದಿದ್ದು, ರಾಜ್ಯದಾದ್ಯಂತ ಮತ್ತೆ ಸೌಜನ್ಯ ಪ್ರಕರಣ ಮುನ್ನಲೆಗೆ ಬಂದಿದೆ. ಈ ನಡುವೆ ಅವರ ಧರ್ಮವನ್ನು ಮುನ್ನಲೆಗೆ ತಂದು ಸಮೀರ್ ಅವರನ್ನು ಅವಮಾನಿಸುತ್ತಿದ್ದಾರೆ ಎಂಬ ಆರೋಪಗಳಿಗೆ ಅವರು ಪ್ರತಿಕ್ರಿಯೆ ನೀಡಿದ್ದು, ಜನರು ಜಾತಿ ಮತ್ತು ಧರ್ಮವನ್ನು ಈ ವಿಷಯಕ್ಕೆ ಏಕೆ ಎಳೆದು ತರುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
