ಪಹಲ್ಗಾಮ್ ದಾಳಿ ಬಳಿಕ ಭಾರತೀಯ ಸೇನೆ ಕಾರ್ಯಾಚರಣೆ ತೀವ್ರಗೊಳಿಸಿದೆ. ಇದರ ಪರಿಣಾಮ ಬಂಡಿಪೊರದಲ್ಲಿ ನಡೆದ ಎನ್‌ಕೌಂಟ್‌ನಲ್ಲಿ ಲಷ್ಕರ್ ಇ ತೈಬಾ ಉಗ್ರ ಸಂಘಟನೆ ಕಾಶ್ಮೀರದ ಕಮಾಂಡರ್ ಅಲ್ತಾಫ್ ಲಲ್ಲಿಗೆ ಸೇನೆ ಗತಿಕಾಣಿಸಿದೆ

ಬಂಡಿಪೊರ(ಏ.25) ಪಹಲ್ಗಾಮ್ ದಾಳಿ ಬೆನ್ನಲ್ಲೇ ಭಾರತೀಯ ಸೇನೆ ಉಗ್ರರ ವಿರುದ್ಧ ಕಾರ್ಯಾಚರಣೆ ಚುರುಕುಗೊಳಿಸಿದೆ. ಕಾಡಿನೊಳಗೆ ಅಡಗಿ ಕುಳಿತಿರುವ ಉಗ್ರರನ್ನು ಹುಡುಕಿ ಹುಡುಕಿ ಹತ್ಯೆ ಮಾಡಲಾಗುತ್ತಿದೆ. ಭಾರತೀಯ ಸೇನೆ ಬಂಡಿಪೊರದಲ್ಲಿ ನಡೆಸುತ್ತಿದ್ದ ಕಾರ್ಯಾಚರಣೆಯಲ್ಲಿ ಭಾರಿ ಯಶಸ್ಸು ಸಿಕ್ಕಿದೆ. ಬಂಡಿಪೊರ ಎನ್‌ಕೌಂಟರ್‌ನಲ್ಲಿ ಲಷ್ಕರ್ ಇ ತೈಬಾ ಉಗ್ರ ಸಂಘಟನೆಯ ಕಾಶ್ಮೀರದ ಕಮಾಂಡರ್ ಅಲ್ತಾಫ್ ಲಲ್ಲಿಯನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ. ಈ ಕಾರ್ಯಾಚರಣೆಯು ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ನಂಬಲಾದ LeT ಭಯೋತ್ಪಾದಕರನ್ನು ಪತ್ತೆಹಚ್ಚುವ ಪ್ರಯತ್ನದ ಒಂದು ಭಾಗವಾಗಿದೆ.
