ಮಂಗಳೂರಿನಲ್ಲಿ ರೌಡಿ ಶೀಟರ್ ಹತ್ಯೆ ಕೇಸ್ನ ತನಿಖೆ ಚುರುಕುಗೊಂಡಿದೆ. ಘಟನೆ ನಡೆದ 24 ಗಂಟೆಯಲ್ಲಿ 8 ಮಂದಿ ಆರೋಪಿಗಳನ್ನು ಪೊಲೀಸರು ಲಾಕ್ ಮಾಡಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ರಾಜಕೀಯ ಕೋಲಾಹಲಕ್ಕೂ ಕಾರಣವಾಗಿದ್ದು,

ಮಂಗಳೂರು, ಮೇ 03: ನಗರದಲ್ಲಿರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ರಾಜಕೀಯ ಕೋಲಾಹಲ ಎಬ್ಬಿಸಿದೆ. ಸುಹಾಶ್ ಶೆಟ್ಟಿ ಇದ್ದ ಕಾರ್‌ಗೆ ಗೂಡ್ಸ್‌ವಾಹನ ಗುದ್ದಿಸಿ ನಂತರ ಐದಾರು ಮಂದಿ ನಡುರಸ್ತೆಯಲ್ಲೇ ತಲ್ವಾರ್‌ಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ನಂತರ ಸ್ವಲ್ಪದೂರದಲ್ಲೇ ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು ಬಿಟ್ಟು ಪರಾರಿಯಾಗಿದ್ದರು. ಆರೋಪಿಗಳ ಬೇಟೆಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಪೊಲೀಸರ 5 ತಂಡ ರಚನೆ ಮಾಡಿದ್ದರು. ಇದೀಗ ಮಹತ್ವದ ಬೆಳವಣಿಗೆಯಲ್ಲಿ ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು (police) ಶಂಕಿತ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

8 ಆರೋಪಿಗಳು ಬಲೆಗೆ
ಸುಹಾಸ್ ಶೆಟ್ಟಿ ಕೊಲೆ ಕೇಸ್ ಸಂಬಂಧ ಒಟ್ಟು 8 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಎಲ್ಲಾ ಶಂಕಿತ ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳು ಮಂಗಳೂರಿನಲ್ಲೇ ಅವಿತ್ತಿದ್ದರು ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆಪಡೆಯಲಾಗಿದೆ.
ಇನ್ನು ಬರ್ಬರ ಹತ್ಯೆ ನಡೆಸಿದ್ದ ದುಷ್ಕರ್ಮಿಗಳನ್ನು ಪತ್ತೆಹಚ್ಚಿದ್ದು, ಪ್ರಮುಖ ಆರೋಪಿ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ. ಇವತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಆರೋಪಿಗಳ ವಿವರ ನೀಡುವ ಸಾಧ್ಯತೆಯಿದೆ.

ಇಂದು ಮಂಗಳೂರಿಗೆ ಗೃಹ ಸಚಿವ ಪರಮೇಶ್ವರ್ ಭೇಟಿ
ಜಿಲ್ಲೆಯಲ್ಲಿ ಆರಾಜಕತೆ ಸೃಷ್ಟಿ ಯಾಗಿದ್ದು,ಇದರ ನಡುವೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಇಂದು ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸಭೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೂಡ ಭಾಗಿಯಾಗಲಿದ್ದಾರೆ.
ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಳಸ (Kalasa) ಮೂಲದವರು ಎಂದು ಗುರುತಿಸಲಾಗಿದ್ದು, ಮಂಗಳೂರಿನ ನಟೋರಿಯಸ್ ಸಫ್ವಾನ್ ಗ್ಯಾಂಗ್‌ಗೆ ಕೆಲಸ ಮಾಡಲು ಸಾಥ್ ನೀಡುತ್ತಿದ್ದರು. ಸದ್ಯ ವಿಡಿಯೋ ಸಾಕ್ಷ್ಯದ ಆಧಾರದ ಮೇಲೆ ಮಂಗಳೂರು ಪೊಲೀಸರು ಎಂಟು ಮಂದಿ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಆ ಪೈಕಿ ಇಬ್ಬರು ಹಿಂದೂ ಯುವಕರನ್ನು ಬಂಧಿಸಿದ್ದಾರೆ
ಕೊಲೆ ಕೃತ್ಯದಲ್ಲಿ ಭಾಗಿಯಾದವರ ಜೊತೆ ಹಿಂದೂ ಯುವಕರು ಸೇರಿದ್ದರು ಎನ್ನುವ ಮಾಹಿತಿ ಲಭ್ಯವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅವಿತು ಕುಳಿತಿದ್ದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ