ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಹತ್ಯೆ ಮಾಡಲಾಗಿದ್ದು, ಈ ಕೊಲೆ ಬಳಿಕ ದಕ್ಷಿಣ ಕನ್ನಡದಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನುಂಟು ಮಾಡಿತ್ತು. ಎಲ್ಲವೂ ತಣ್ಣಹಾಯ್ತು ಎನ್ನುವರಷ್ಟರಲ್ಲಿ ಇದೀಗ ಏಟಿಗೆ ಎದುರೇಟು, ಪ್ರತೀಕಾರದ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದರ ಮಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇನಕಾರಿ ಪೋಸ್ಟ್ ಹಾಕಿದ್ದ ಹೋಂ ಗಾರ್ಡ್ ಅರೆಸ್ಟ್ ಆಗಿದ್ದಾನೆ.

ಉಡುಪಿ, (ಮೇ 04): , ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ (Suhas Shetty Murder Case) ಸಂಬಂಧಿಸಿದಂತೆ ಈಗಾಗಲೇ ಮಂಗಳೂರು ಪೊಲೀಸರು (Mangaluru Police) 8 ಜನರನ್ನು ಬಂಧಿಸಿದ್ದು, ತನಿಖೆ ತನಿಖೆ ನಡೆಸಿದ್ದಾರೆ. ಇದರ ಮಧ್ಯ ಸುಹಾಸ್ ಶೆಟ್ಟಿ ಕೊಲೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರತೀಕಾರದ ಬೆದರಿಕೆಗಳು ಹರಿದಾಡುತ್ತಿವೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೋಂ ಗಾರ್ಡ್ ಅವಹೇಳಕನಕಾರಿ ಕಮೆಂಟ್ ಮಾಡಿದ್ದಾನೆ. ಹೌದು…ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಕಾಮೆಂಟ್ ಹಾಕಿದ್ದ ಉಡುಪಿಯ ಕಾರ್ಕಳದ ಹೋಂ ಗಾರ್ಡ್ ಸಂಪತ್ ಸಾಲಿಯಾನ್ ಬಂಧನವಾಗಿದೆ.

ಬೆಂಗಳೂರಿನ ಹೋಂ ಗಾರ್ಡ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂಪತ್ ಸಾಲಿಯಾನ್ ಎನ್ನುವಾತ ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಸಂಪತ್ ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಹಾಕಿದ್ದಾನೆ. ಈ ಸಂಬಂಧ ಸದ್ಯ ಕಾರ್ಕಳ ಪೊಲೀಸರು ಹೋಂ ಗಾರ್ಡ್ ಸಂಪತ್ನನ್ನು ಬಂಧಿಸಿದ್ದಾರೆ.

ಹೆಚ್ಚಾದ ಪ್ರತೀಕಾರದ ಸಂದೇಶಗಳು
“ಸುಹಾಸ್ ಶೆಟ್ಟಿಯನ್ನು ಕೊಂದವರು, ಕೊಂದವರ ಮನೆಯವರು, ಅಲ್ಲಿ ಯಾರು ಸಿಗುತ್ತಾರೆ ಅವರನ್ನು ಕೊಚ್ಚಿ ಕೊಲ್ಲುತ್ತೇವೆ” ಎಂದು ಧನುಷ್.ಸಿ ಎಂಬುವರು ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದ ಫೇಸ್ಬುಕ್ ಫೋಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ನಿವಾಸಿ ಧನುಷ್.ಸಿ ಪುಂಜಾಲಕಟ್ಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೋಮುದ್ವೇಷ ಹರಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವಂಥ ಪ್ರಚೋದನಾತ್ಮಕ ವಿಡಿಯೋವನ್ನು ಪ್ರಸಾರಮಾಡಿದ ಹಿನ್ನೆಲೆಯಲ್ಲಿ ಬಿಎನ್ಎಸ್ 196(1)(A), 353(1)(C)ರ ಅಡಿ ಪ್ರಕರಣ ದಾಖಲಾಗಿದೆ.
