ಶ್ರೀನಗರ: ಪಹಲ್ಗಾಮ್ ಉಗ್ರರ ದಾಳಿಗೆ(Pahalgam Terror Attack) ಪ್ರತೀಕಾರವಾಗಿ ಭಾರತ ತಡರಾತ್ರಿ ಪಾಕಿಸ್ತಾನದ(Pakistan) ಉಗ್ರರ ಅಡಗುತಾಣಗಳ ಮೇಲೆ ಏರ್‌ಸ್ಟ್ರೈಕ್(Air Strike) ನಡೆಸಿದೆ. ದಾಳಿಯ ಬೆನ್ನಲ್ಲೇ ವಾಯು ನೆಲೆಯನ್ನು ಬಂದ್ ಮಾಡಲಾಗಿದ್ದು, ಶ್ರೀನಗರದಿಂದ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.
ಆಪರೇಷನ್ ಸಿಂಧೂರ ಹೆಸರಿನಲ್ಲಿ ಭಾರತ ತಡರಾತ್ರಿ 1:44ಕ್ಕೆ ದಾಳಿ ನಡೆಸಿದೆ. ರಫೇಲ್ ಯುದ್ಧ ವಿಮಾನಗಳನ್ನು ಬಳಸಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿರುವ(PoK ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಏರ್‌ಸ್ಟ್ರೈಕ್ ನಡೆದಿದೆ. ಈ ದಾಳಿಗಳಲ್ಲಿ ಮೂವತ್ತಕ್ಕೂ ಹೆಚ್ಚು ಉಗ್ರರು ಮೃತಪಟ್ಟಿರುವುದಾಗಿ ಕೆಲ ವರದಿಗಳು ತಿಳಿಸಿವೆ
ಉಗ್ರರ 9 ಸ್ಥಳಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಿದ್ದೇವೆ. ಯಾವುದೇ ಯಾವುದೇ ಪಾಕಿಸ್ತಾನಿ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿಲ್ಲ ಎಂದು ಭಾರತೀಯ ಸೇನೆ ತಿಳಿಸಿದೆ. ಗುರಿ ಮಾಡಲಾದ ೯ ಸ್ಥಳಗಳಲ್ಲಿ ಬಹಾವಲ್ಪುರದಲ್ಲಿರುವ ಜೈಶ್-ಎ-ಮೊಹಮ್ಮದ್ ಪ್ರಧಾನ ಕಚೇರಿ ಮತ್ತು ಮುರಿಡ್ಕೆಯಲ್ಲಿರುವ ಲಷ್ಕರ್-ಎ-ತೈಬಾ ಸೇರಿವೆ ಎಂದು ಮೂಲಗಳು ತಿಳಿಸಿವೆ.

ಒಂಬತ್ತು ಗುರಿಗಳಲ್ಲಿ ನಾಲ್ಕು ಪಾಕಿಸ್ತಾನದಲ್ಲಿ ಮತ್ತು ಐದು ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದವು. ಪಾಕಿಸ್ತಾನದಲ್ಲಿರುವ ಗುರಿಗಳಲ್ಲಿ ಬಹಾವಲ್ಪುರ್, ಮುರಿಡ್ಕೆ ಮತ್ತು ಸಿಯಾಲ್‌ಕೋಟ್ ಸೇರಿವೆ. ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಲು ವಿಶೇಷ ನಿಖರ ಯುದ್ಧಸಾಮಗ್ರಿಗಳನ್ನು ಬಳಸಲಾಗಿದೆ