Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಆಪರೇಷನ್ ಸಿಂಧೂರ್: ಪಾಕಿಸ್ತಾನಕ್ಕೆ ದಿಟ್ಟ ಉತ್ತರ ನೀಡಿದ ಕರ್ನಲ್ ಸೋಫಿಯಾ ಖುರೇಷಿ ಯಾರು? ಇಲ್ಲಿದೆ ಮಾಹಿತಿ

editor tv by editor tv
May 8, 2025
in ರಾಷ್ಟ್ರೀಯ
0
ಆಪರೇಷನ್ ಸಿಂಧೂರ್: ಪಾಕಿಸ್ತಾನಕ್ಕೆ ದಿಟ್ಟ ಉತ್ತರ ನೀಡಿದ ಕರ್ನಲ್ ಸೋಫಿಯಾ ಖುರೇಷಿ ಯಾರು? ಇಲ್ಲಿದೆ ಮಾಹಿತಿ
1.9k
VIEWS
Share on FacebookShare on TwitterShare on Whatsapp

India Strikes Pakistan; ಭಾರತೀಯ ಸೇನೆಯು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ಜಂಟಿ ದಾಳಿ ನಡೆಸಿದ್ದು, ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಪ್ರಮುಖ ಮಾಹಿತಿ ನೀಡಿದರು. ಸೋಫಿಯಾ ಖುರೇಷಿ ಅವರ ಹಿನ್ನೆಲೆ, ಸೇನಾ ಸೇವೆ ಮತ್ತು ವಿಶೇಷಗಳ ಬಗ್ಗೆ ಇಲ್ಲಿದೆ ಮಾಹಿತಿ

ನವದೆಹಲಿ, ಮೇ 7: ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದಲ್ಲಿರುವ 9 ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಜಂಟಿ ದಾಳಿ ಮಾಡಿ ಉಗ್ರರ ನೆಲೆಗಳನ್ನು ಉಡೀಸ್ ಮಾಡಿದೆ.ಆಪರೇಷನ್ ಸಿಂದೂರ್ (Operation Sindoor) ನಂತರ ಭಾರತೀಯ ಸೇನಾಧಿಕಾರಿಗಳು ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದು, ಇಬ್ಬರು ಮಹಿಳಾ ಅಧಿಕಾರಿಗಳೇ ಮುಖ್ಯ ಮಾಹಿತಿ ನೀಡಿದರು. ಇದರಲ್ಲಿ ಒಬ್ಬರ ಹೆಸರು ಸೋಫಿಯಾ ಖುರೇಷಿ. ಇನ್ನೊಬ್ಬರ ಹೆಸರು ವ್ಯೋಮಿಕಾ ಸಿಂಗ್. ಸೋಫಿಯಾ ಖುರೇಷಿ ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿದ್ದರೆ, ವ್ಯೋಮಿಕಾ ಸಿಂಗ್ ಭಾರತೀಯ ವಾಯುಪಡೆಯಲ್ಲಿ ವಿಂಗ್ ಕಮಾಂಡರ್ ಆಗಿದ್ದಾರೆ. ಸೋಫಿಯಾ ಖುರೇಷಿ ಬಗ್ಗೆ ಇಲ್ಲಿದೆ ಮಾಹಿತಿ.

ಸೋಫಿಯಾ ಖುರೇಷಿ ಹಿನ್ನೆಲೆ

ಸೋಫಿಯಾ ಖುರೇಷಿ ಮೂಲತಃ ಗುಜರಾತ್‌ನವರು. ಅವರು 1981 ರಲ್ಲಿ ಗುಜರಾತ್‌ನ ವಡೋದರಾದಲ್ಲಿ ಜನಿಸಿದ್ದ ಅವರು, ಜೀವರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸೋಫಿಯಾ ಅಜ್ಜ ಕೂಡ ಭಾರತೀಯ ಸೇನೆಯಲ್ಲಿದ್ದರು. ಅವರ ತಂದೆ ಕೂಡ ಕೆಲವು ವರ್ಷಗಳ ಕಾಲ ಸೈನ್ಯದಲ್ಲಿ ಧಾರ್ಮಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು ಎಂದು ಮೂಲಗಳು ತಿಳಿಸಿವೆ.

1999 ರಲ್ಲಿ ಸೇನೆ ಸೇರಿದ್ದ ಸೋಫಿಯಾ ಖುರೇಷಿ

ಸೋಫಿಯಾ ಖುರೇಷಿ 1999 ರಲ್ಲಿ ಭಾರತೀಯ ಸೇನೆಗೆ ಸೇರಿದರು. ಅವರು ಚೆನ್ನೈನ ಅಧಿಕಾರಿಗಳ ತರಬೇತಿ ಅಕಾಡೆಮಿಯಲ್​ಲಿ ತರಬೇತಿ ಪಡೆದರು. ಇದಾದ ನಂತರ, ಸೈನ್ಯದಲ್ಲಿ ಲೆಫ್ಟಿನೆಂಟ್ ಆಗಿ ಸೋಫಿಯಾ ನೇಮಕಗೊಂಡರು. ಸೋಫಿಯಾ 2006 ರಲ್ಲಿ ಕಾಂಗೋದಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯಲ್ಲಿ ಮಿಲಿಟರಿ ವೀಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರು 2010 ರಿಂದ ಮತ್ತೆ ಶಾಂತಿಪಾಲನಾ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಪಂಜಾಬ್ ಗಡಿಯಲ್ಲಿ ಆಪರೇಷನ್ ಪರಾಕ್ರಮ್

ಸೋಫಿಯಾ ಖುರೇಷಿ ಪಂಜಾಬ್ ಗಡಿಯಲ್ಲಿ ಆಪರೇಷನ್ ಪರಾಕ್ರಮ್ ಸಮಯದಲ್ಲಿ ಸಲ್ಲಿಸಿದ್ದ ಸೇವೆಗಾಗಿ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಅವರಿಂದ ಪ್ರಶಂಸಾ ಪತ್ರವನ್ನು ಸಹ ಪಡೆದಿದ್ದಾರೆ. ಈಶಾನ್ಯ ಭಾರತದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗಳ ಸಮಯದಲ್ಲಿ ಅವರು ಮಾಡಿದ ಅತ್ಯುತ್ತಮ ಕೆಲಸಕ್ಕಾಗಿ ಸಿಗ್ನಲ್ ಆಫೀಸರ್ ಇನ್ ಚೀಫ್ ಅವರಿಂದ ಪ್ರಶಂಸಾ ಪತ್ರವನ್ನು ಸಹ ಪಡೆದಿದ್ದಾರೆ.

ಸೇವೆಗಾಗಿ ಅವರು ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ (GOC-in-C) ಅವರಿಂದ ಪ್ರಶಂಸಾ ಪತ್ರವನ್ನು ಸಹ ಪಡೆದಿದ್ದಾರೆ. ಈಶಾನ್ಯ ಭಾರತದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗಳ ಸಮಯದಲ್ಲಿ ಅವರು ಮಾಡಿದ ಅತ್ಯುತ್ತಮ ಕೆಲಸಕ್ಕಾಗಿ ಸಿಗ್ನಲ್ ಆಫೀಸರ್ ಇನ್ ಚೀಫ್ ಅವರಿಂದ ಪ್ರಶಂಸಾ ಪತ್ರವನ್ನು ಸಹ ಪಡೆದಿದ್ದಾರೆ.

ಭಾರತೀಯ ಸೇನೆಯ ಮೊದಲ ಮಹಿಳಾ ಅಧಿಕಾರಿ ಸೋಫಿಯಾ ಖುರೇಷಿ

ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ 2016 ರಲ್ಲಿ ಬಹುರಾಷ್ಟ್ರೀಯ ಮಿಲಿಟರಿ ಕವಾಯತಿನಲ್ಲಿ ಭಾರತೀಯ ತುಕಡಿಯನ್ನು ಮುನ್ನಡೆಸಿ ಗಮನ ಸೆಳೆದಿದ್ದರು. ನಂತರ ಅವರು ಭಾರತೀಯ ಸೇನೆಯ ಮೊದಲ ಮಹಿಳಾ ಅಧಿಕಾರಿಯಾದರು. ಬಹುರಾಷ್ಟ್ರೀಯ ಮಿಲಿಟರಿ ಕವಾಯತನ್ನು ‘ಎಕ್ಸರ್ಸೈಸ್ ಫೋರ್ಸ್ 18’ ಎಂದು ಹೆಸರಿಸಲಾಗಿತ್ತು. ಇದು ಆ ಸಮಯದಲ್ಲಿ ಭಾರತ ಆಯೋಜಿಸಿದ್ದ ಅತಿದೊಡ್ಡ ವಿದೇಶಿ ಮಿಲಿಟರಿ ಕವಾಯತು ಆಗಿತ್ತು.

ಆ ಕವಾಯತಿನಲ್ಲಿ ಭಾಗವಹಿಸಿದ್ದ 18 ತಂಡಗಳಲ್ಲಿ ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ ಏಕೈಕ ಮಹಿಳಾ ಅಧಿಕಾರಿಯಾಗಿದ್ದರು. ಭಾರತೀಯ ತಂಡದಲ್ಲಿ ಒಟ್ಟು 40 ಸದಸ್ಯರಿದ್ದರು

ಆಪರೇಷನ್ ಸಿಂಧೂರವನ್ನು ಜಗತ್ತಿಗೆ ವಿವರಿಸಿದ್ದ ಕರ್ನಲ್ ಸೋಫಿಯಾ ಬೆಳಗಾವಿಯ ಸೊಸೆ

ಬೆಳಗಾವಿ: ಆಪರೇಷನ್ ಸಿಂಧೂರ(Operation Sindoor) ಕಾರ್ಯಚರಣೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಶಿಯವರು(Sophia Qureshi) ಬೇರೆ ಯಾರು ಅಲ್ಲ. ಅವರು ಕರ್ನಾಟಕದ ಬೆಳಗಾವಿಯ(Belagavi) ಹೆಮ್ಮೆಯ ಸೊಸೆ.

ಕಾಶ್ಮೀರದ ಪಹಲ್ಗಾಮ್‌ನಲ್ಲಿ(Pahalgam) ನಡೆದ ಭಾರತೀಯರ ಹತ್ಯಾಕಾಂಡದ ಪ್ರತೀಕಾರವಾಗಿ ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆಯು ಆಪರೇಷನ್ ಸಿಂಧೂರ ಹೆಸರಿನ ಏರ್‌ಸ್ಟ್ರೈಕ್‌ ಮಾಡಿತ್ತು. ಈ ಕಾರ್ಯಚರಣೆಯ ಮಾಹಿತಿಯನ್ನು ನೀಡಿದ ಕರ್ನಲ್ ಸೋಫಿಯಾ ಖುರೇಶಿ ಅವರ ಪತಿ ತಾಜುದ್ದೀನ್ ಬಾಗೇವಾಡಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರು ಗ್ರಾಮದ ನಿವಾಸಿಯಾಗಿದ್ದಾರೆ

ಮೂಲತಃ ಗುಜರಾತ್(Gujarat) ರಾಜ್ಯದ ವಡೋದರದವರಾದ ಖುರೇಶಿ, 2015ರಲ್ಲಿ ತಾಜುದ್ದೀನ್ ಅವನ್ನು ಪ್ರೇಮ ವಿವಾಹವಾಗಿದ್ದರು. ಪತಿ ತಾಜುದ್ದೀನ್ ಬಾಗೇವಾಡಿ ಹಾಗೂ ಪತ್ನಿ ಸೋಫಿಯಾ ಖುರೇಶಿ ಇಬ್ಬರೂ ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ದೇಶ ಸೇವೆ ಮಾಡುತ್ತಿದ್ದಾರೆ. ಬೆಳಗಾವಿಯ ಸೊಸೆಯಾಗಿರುವ ಖುರೇಶಿ ಈಗ ಭಾರತದ ಹೆಮ್ಮೆಯ ಪುತ್ರಿ. ಸದ್ಯ ಖುರೇಶಿ ಪತಿ ತಾಜುದ್ದೀನ್ ಜಾನ್ಸಿಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. 

Previous Post

ನಮ್ಮ ಅಮಾಯಕರನ್ನು ಕೊಂದವರನ್ನಷ್ಟೇ ನಾವು ಕೊಂದಿದ್ದೇವೆ..’; ಆಪರೇಷನ್ ಸಿಂಧೂರ್ ಬಗ್ಗೆ ರಾಜನಾಥ್ ಸಿಂಗ್ ಸ್ಪಷ್ಟನೆ

Next Post

ನೋಡ ನೋಡ್ತಿದ್ದಂತೆ ನೆಲಕ್ಕುರುಳಿದ ಹೆಲಿಕಾಪ್ಟರ್.. ಉತ್ತರಕಾಶಿಯಲ್ಲಿ ಜೀವ ಕಳೆದುಕೊಂಡ 5 ಭಕ್ತರು

Next Post
ನೋಡ ನೋಡ್ತಿದ್ದಂತೆ ನೆಲಕ್ಕುರುಳಿದ ಹೆಲಿಕಾಪ್ಟರ್.. ಉತ್ತರಕಾಶಿಯಲ್ಲಿ ಜೀವ ಕಳೆದುಕೊಂಡ 5 ಭಕ್ತರು

ನೋಡ ನೋಡ್ತಿದ್ದಂತೆ ನೆಲಕ್ಕುರುಳಿದ ಹೆಲಿಕಾಪ್ಟರ್.. ಉತ್ತರಕಾಶಿಯಲ್ಲಿ ಜೀವ ಕಳೆದುಕೊಂಡ 5 ಭಕ್ತರು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.