
ಉತ್ತರಕಾಶಿ: ಇಂದು ಬೆಳ್ಳಿಗೆ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಪರಿಣಾಮ ಈ ಅಪಘಾತದಲ್ಲಿ 5 ಮಂದಿ ಪ್ರವಾಸಿಗರು ಮೃತಪಟ್ಟಿದ್ದಾರೆ.

ಹೆಲಿಕಾಪ್ಟರ್‌ನಲ್ಲಿ ಸುಮಾರು 7 ಜನ ಇದ್ದರು ಎನ್ನಲಾಗಿದ್ದು, ಈ ಪೈಕಿ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಂಗೋತ್ರಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು, ಸೇನಾ ಪಡೆ, ವಿಪತ್ತು ನಿರ್ವಹಣಾ ತಂಡ ಮತ್ತು ಆಂಬ್ಯುಲೆನ್ಸ್‌ಗಳು ಉತ್ತರಕಾಶಿಗೆ ಧಾವಿಸಿದ್ದಾರೆ. ಇನ್ನೂ ಹೆಲಿಕಾಪ್ಟರ್ ಪತನಗೊಂಡ ಬಗ್ಗೆ ಉತ್ತರಕಾಶಿ ಜಿಲ್ಲಾಧಿಕಾರಿ ವಿನಯ್ ಶಂಕರ್ ಪಾಂಡೆ ಮಾಹಿತಿ ಖಚಿತಪಡಿಸಿದ್ದಾರೆ. ಜೊತೆಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.