ಬೆಳ್ತಂಗಡಿ: ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ವೇದಿಕೆಯಲ್ಲಿ ಸ್ಥಳೀಯ ಶಾಸಕ ಹರೀಶ್ ಪೂಂಜಾ ಗ್ರಾಮದ ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಸ್ಥಳೀಯ ಮುಸ್ಲಿಮ್ ಮುಖಂಡರ ಜತೆ ದೇವಸ್ಥಾನದ ಆಡಳಿತ ಮಂಡಳಿಯು ಸಭೆ ನಡೆಸಿ, ವಿಷಾದ ಪತ್ರ ಬರೆದಿದೆ.
ಶ್ರೀ ಗೋಪಾಲಕೃಷ್ ಭಟ್ರಬೈಲು, ದೇವರ ಗುಡ್ಡೆ ಸೇವಾ ಟ್ರಸ್ಟ್ ಅಧ್ಯಕ್ಷರು ಸರಳೀಕಟ್ಟೆ ಮುಸ್ಲಿಮ್ ಒಕ್ಕೂಟದವರಿಗೆ ಪತ್ರ ಬರೆದು ದ್ವೇಷ ಭಾಷಣದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಹಿಂದಿನ ಹಾಗೆಯೇ ಸೌಹಾರ್ದಯುತವಾದ ಬದುಕು ನಡೆಯಬೇಕಾಗಿದೆ. ಮುಸ್ಲಿಮರ ಸಹಕಾರವನ್ನು ದೇವಸ್ಥಾನ ಆಡಳಿತ ಮಂಡಳಿ ಸ್ವಾಗತಿಸುತ್ತದೆ. ಮುಂದೆಯೂ ಎಲ್ಲಾ ಸಮುದಾಯದವರು ಒಬ್ಬರಿಗೊಬ್ಬರು ಸಹಕಾರದೊಂದಿಗೆ ಬದುಕಬೇಕು ಎಂಬುದು ನಮ್ಮ ಆಶಯ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದಕ್ಕೆ ಸ್ಪಷ್ಠೀಕರಣ ನೀಡುವ ಸಲುವಾಗಿ ಹಿಂದೂ – ಮುಸ್ಲಿಮ್ ಮುಖಂಡರ ಸಭೆ ನಡೆಸಲಾಯಿತು. ಸಭೆಯಲ್ಲಿ ಘಟನೆ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿಯು ತೀವ್ರ ವಿಷಾದ ವ್ಯಕ್ತಪಡಿಸಿತು ಎನ್ನಲಾಗಿದೆ.
ಸ್ಥಳೀಯ ಮುಸ್ಲಿಮರು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಬೇಕಾದ ಎಲ್ಲಾ ರೀತಿಯ ಸಹಾಯ ಸಹಕಾರಗಳನ್ನು ಮಾಡಿದ್ದರು. ಮುನೀರ್ ಎಂಬವರು ಮರವನ್ನು ನೀಡಿದ್ದರು, ಅಬ್ಬಾಸ್ ಎಂಬವರು ವೇದಿಕೆ ನಿರ್ಮಿಸಲು ಸ್ಥಳವನ್ನು ನೀಡಿದ್ದರು, ಭಕ್ತಾದಿಗಳಿಗೆ ವಾಹನ ಪಾರ್ಕಿಂಗ್ ವ್ಯವಸ್ಥೆಯನ್ನು ಟಿ.ಎಚ್.ಉಸ್ತಾದರ ಮಕ್ಕಳ ಒಡೆತನದ ಜಮೀನಿನಲ್ಲಿ ನೀಡಲಾಗಿತ್ತು, ನೀರಿನ ವ್ಯವಸ್ಥೆಗೆ ಮತ್ತು ಅನ್ನ ಸಂತರ್ಪಣೆಗೆ ಮುಸ್ಲಿಮರ ಜಾಗವನ್ನೇ ಬಳಸಲಾಗಿತ್ತು. ಇದಲ್ಲದೆ ಆರ್ಥಿಕವಾಗಿಯೂ ಗ್ರಾಮದ ಮುಸ್ಲಿಮರು ದೇವಸ್ಥಾನಕ್ಕೆ ಸಹಾಯವನ್ನು ನೀಡಿದ್ದರು. ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಸ್ಥಳೀಯ ಮುಸ್ಲಿಮರು ಬ್ಯಾನರ್ ಗಳನ್ನು ಅಳವಡಿಸಿದ್ದರ ಬಗ್ಗೆ ಮುಸ್ಲಿಮ್ ಒಕ್ಕೂಟದ ಪ್ರತಿನಿಧಿಗಳು ಸಭೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳ ಗಮನ ಸೆಳೆದರು
ಪ್ರಕರಣದ ಹಿನ್ನೆಲೆ
ಮೇ 3ರಂದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ನೂತನ ದೇವಸ್ಥಾನದ ಬ್ರಹ್ಮಕಲಶ (ಉದ್ಘಾಟನೆ) ಕಾರ್ಯಕ್ರಮದಲ್ಲಿ ಸ್ಥಳೀಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಮುಸ್ಲಿಮರ ವಿರುದ್ದ ಕೋಮುದ್ವೇಷದ ಭಾಷಣ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಸಂವಿಧಾನದ ಅಡಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಜನಪ್ರತಿನಿಧಿಯೇ ಶಾಂತಿ, ಸಾಮರಸ್ಯದ ಊರಿನಲ್ಲಿ ಮತೀಯದ್ವೇಷ ಕಾರಿರುವುದಕ್ಕೆ ಗ್ರಾಮದ ಜನರು ಬೇಸರ ವ್ಯಕ್ತಪಡಿಸಿದ್ದರು.
ತೆಕ್ಕಾರು ಗ್ರಾಮದ ಭಟ್ರಬೈಲಿನ ದೇವರಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿದ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮವನ್ನು 2025 ಏಪ್ರಿಲ್ 25ರಿಂದ ಮೇ 3ರವರೆಗೆ ಆಯೋಜಿಸಲಾಗಿತ್ತು. ಕೊನೆಯ ದಿನವಾದ ಶನಿವಾರ (ಮೇ.3) ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಹರೀಶ್ ಪೂಂಜಾ, ಬ್ಯಾರಿ ಸಮುದಾಯದವರ (ಸ್ಥಳೀಯ ಮುಸ್ಲಿಮರು) ವಿರುದ್ಧ ದ್ವೇಷ ಭಾಷಣ ಮಾಡಿದ್ದರು.
ತೆಕ್ಕಾರು ಗ್ರಾಮದ ಭಟ್ರಬೈಲಿನ ದೇವರಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿದ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮವನ್ನು 2025 ಏಪ್ರಿಲ್ 25ರಿಂದ ಮೇ 3ರವರೆಗೆ ಆಯೋಜಿಸಲಾಗಿತ್ತು. ಕೊನೆಯ ದಿನವಾದ ಶನಿವಾರ (ಮೇ.3) ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಹರೀಶ್ ಪೂಂಜಾ, ಬ್ಯಾರಿ ಸಮುದಾಯದವರ (ಸ್ಥಳೀಯ ಮುಸ್ಲಿಮರು) ವಿರುದ್ಧ ದ್ವೇಷ ಭಾಷಣ ಮಾಡಿದ್ದರು.
“ಬ್ಯಾರಿಗಳ (ಮುಸ್ಲಿಮರ) ಆಕ್ರಮಣದಿಂದ ಅಯೋಧ್ಯೆಯ ರಾಮ ಮಂದಿರ ಮಸೀದಿಯಾದ ಬಳಿಕ ನಾವು 500 ವರ್ಷ ಕಾದೆವು. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದು.. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದು ಎಂದಾಗ ಅರ್ಥ ಮಾಡಿಕೊಳ್ಳಲಿಲ್ಲ. ನಾವು 500 ವರ್ಷ ಕಾದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿದೆವು.” ಎಂದು ಪೂಂಜಾ ಹೇಳಿದ್ದರು.
ತೆಕ್ಕಾರಿನಲ್ಲಿ ಒಬ್ಬನೇ ಒಬ್ಬ ಬ್ಯಾರಿ (ಮುಸ್ಲಿಂ) ಇಲ್ಲದಿದ್ದಾಗಲೂ ನಮ್ಮ ಹಿರಿಯರು ಗೋಪಾಲಕೃಷ್ಣ ದೇವರನ್ನು ನಂಬಿಕೊಂಡು ಬಂದಿದ್ದರು. ಬಳಿಕ ಬ್ಯಾರಿಗಳ ಅಥವಾ ಟಿಪ್ಪುವಿನ ಆಕ್ರಮಣದಿಂದ ಗೋಪಾಲಕೃಷ್ಣ ದೇವಸ್ಥಾನ ಧ್ವಂಸಗೊಂಡು ನೆಲದಡಿಗೆ ಹೋದರೂ, ನಾವು ಹಿಂದೂ ಸಮಾಜ ನಿದ್ದೆಯಲ್ಲಿದ್ದೆವು, ನಾವು ಎದ್ದಿರಲಿಲ್ಲ. ಕಾಲಚಕ್ರ ಉರುಳಿ, ಉರುಳಿ ಅಯೋಧ್ಯೆಯಲ್ಲಿ ರಾಮ ಪ್ರತಿಷ್ಠೆ ಆದ ಮರುವರ್ಷ, ಅಂದರೆ 2025ರಲ್ಲಿ ತೆಕ್ಕಾರಿನಲ್ಲಿ ಇರುವ ಅತ್ಯಲ್ಪ ಹಿಂದೂ ಸಮಾಜ ಒಂದಾಗಿ ಗೋಪಾಲಕೃಷ್ಣ ದೇವರನ್ನು ಪ್ರತಿಷ್ಠೆ ಮಾಡುವ ಸಂಕಲ್ಪ ಬಂತಲ್ವ ಅದಕ್ಕೆ ಗೋಪಾಲಕೃಷ್ಣ ದೇವರ ಪ್ರೇರಣೆ ಇದೆ” ಎಂದು ಅವರು ತಿಳಿಸಿದ್ದರು.
ಇತಿಹಾಸವನ್ನು ಮತ್ತೊಮ್ಮೆ ನೀವು ಮರೆತ್ತದ್ದೇ ಆದರೆ, ನಿಮ್ಮ ಊರಿನಲ್ಲಿರುವುದು 150 ಹಿಂದೂಗಳ ಮನೆಗಳು, ಒಂದು ಸಾವಿರಕ್ಕಿಂತಲೂ ಅಧಿಕ ಇರುವುದು ಬ್ಯಾರಿಗಳು. ಇನ್ನು 10 ವರ್ಷ ಕಳೆದರೆ 1,200 ಇರುವ ಬ್ಯಾರಿಗಳ ಸಂಖ್ಯೆ 600ಕ್ಕೆ ಇಳಿಯುವುದಿಲ್ಲ. ಇನ್ನು 10 ವರ್ಷ ಕಳೆದರೆ ತೆಕ್ಕಾರಿನ ಬ್ಯಾರಿಗಳ ಸಂಖ್ಯೆ 5 ಸಾವಿರ ಆಗುತ್ತದೆ. 5 ಸಾವಿರದಿಂದ 10 ಸಾವಿರ ಆದರೂ, ಇಲ್ಲಿರುವ ಹಿಂದೂ ಸಮಾಜ ಸನಾತನವಾಗಿ ಸಾವಿರ ವರ್ಷ ಗೋಪಾಲಕೃಷ್ಣ ದೇವರನ್ನು ಆರಾಧನೆ ಮಾಡುತ್ತೇವೆ ಎನ್ನುವ ಸಂಕಲ್ಪ ಮಾಡುವ ದಿನ, ಇಂದಿನ ಬ್ರಹ್ಮಕಲಶೋತ್ಸವದ ದಿನ” ಎಂದಿದ್ದರು.
ಬ್ಯಾರಿಗಳಲ್ಲಿ ಎಷ್ಟು ಜಾತಿ ಇದೆ ಎಂದು ಕೇಳಿದರೆ ಅಂಕಿ ಅಂಶ ಹೇಳುತ್ತದೆ, ಮೊನ್ನೆ ಸಿದ್ದರಾಮಯ್ಯ ಜನಗಣತಿ ಮಾಡಿದರು, ಅದರಲ್ಲಿ ಬ್ಯಾರಿಗಳಲ್ಲಿ ಜಾತಿ ಇದೆಯಾ ಕೇಳಿದರೆ, ಜಾತಿ ಇಲ್ಲ ಎಂದಿದ್ದಾರೆ. ಬ್ಯಾರಿಗಳಲ್ಲಿ ಕನಿಷ್ಠ 70-74 ಜಾತಿಗಳಿವೆ. ಆದರೆ, ನಮಗೆ ಯಾವ ಜಾತಿ ಎಂದು ಯಾರಿಗೂ ಗೊತ್ತಿಲ್ಲ. ನಮಗೆ ಗೊತ್ತಿರುವುದು ಏನು ಎಂದರೆ, ಉಸ್ಮಾನಾಕ, ಅಬ್ದುಲ್ಲಾಕ, ಇಬ್ರಾಹಿಂ ಎಲ್ಲಾ ಬ್ಯಾರಿ ಎಂದೇ ಗೊತ್ತಿರುವುದು. ಆದರೆ, ಹಿಂದೂ ಸಮಾಜದಲ್ಲಿ ನಾವು ಆ ರೀತಿಯಲ್ಲ. ಅವನು ಯಾರು..ಅವನು ಬ್ರಾಹ್ಮಣ, ಇವನು ಯಾರು..ಅವನು ಶೆಟ್ಟಿ, ಅವನು ಯಾರು.. ಅವನು ಬಿಲ್ಲವ, ಇವನು ಯಾರು..ಅವನು ಗೌಡ, ಇವನು ಯಾರು..ಅವನು ಕುಲಾಲ, ಈ ರೀತಿಯ ಜಾತಿ-ಜಾತಿ ನಮಗೆ ಮಾತ್ರ ಗೊತ್ತಿರುವುದಲ್ಲ, ಬ್ಯಾರಿಗಳಿಗೂ ಗೊತ್ತಿದೆ” ಎಂದು ಅವರು ತಿಳಿಸಿದ್ದರು.
ಇಲ್ಲಿನ ಕಂತ್ರಿ (ದುಷ್ಟ) ಬ್ಯಾರಿಗಳು ಟ್ಯೂಬ್‌ಲೈಟ್ ಪುಡಿಗೈದಾಗ, ಸಂಖ್ಯೆ ಕಡಿಮೆ ಇದ್ದರೂ ಜನ ಸಾಗರ ಇರುವ ಗ್ರಾಮದ ರೀತಿ ತೆಕ್ಕಾರಿನವರು ಯಾರೂ ಎದೆಗುಂದಲಿಲ್ಲ. ಅಣ್ಣ ದಿನ ಬೆಳಗಾದರೆ ತೆಕ್ಕಾರಿನ ಕಂತ್ರಿ ಬ್ಯಾರಿಗಳು ಬಂದು ಟ್ಯೂಬ್ ಲೈಟ್ ಪುಡಿ ಮಾಡುತ್ತಿದ್ದಾರೆ, ಡೀಸೆಲ್ ಕದಿಯುತ್ತಿದ್ದಾರೆ ಎಂದು ನಮ್ಮ ಯುವಕರು ಹೇಳಿದ್ದಾರೆ. ನಾನು ಹೇಳಿದೆ ನೀವು ಏನೂ ತಲೆಬಿಸಿ ಮಾಡಿಕೊಳ್ಳಬೇಡಿ. ಬ್ರಹ್ಮಕಲಶ ಆಗಿ ನಾಡಿದ್ದು ದೊಡ್ಡ ಕಲಶ ಆಗುವ ಮುನ್ನ ಟ್ಯೂಬ್‌ಲೈಟ್ ಪುಡಿ ಮಾಡಿದವರಲ್ಲಿ ಯಾರಿಗಾದರು ಗೊತ್ತಾಗುತ್ತದೆ. ಗೋಪಾಲಕೃಷ್ಣ ದೇವರು ಎಲ್ಲಾದರು ತೋರಿಸುತ್ತಾರೆ, ನೀವು ಗಡಿಬಿಡಿ ಮಾಡಲು ಹೋಗಬೇಡಿ ಎಂದು ಹೇಳಿದೆ” ಎಂದಿದ್ದರು.