ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ನೌಷಾದ್ ಮೇಲೆ ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಇತರ ಕೈದಿಗಳಿಂದ ದಾಳಿ ಮಾಡಿರುವಂತಹ ಘಟನೆ ನಡೆದಿದೆ. ಅದೃಷ್ಟವಶಾತ್ ನೌಷಾದ್ ಪಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರು ಕಾರಾಗೃಹಕ್ಕೆ ಸ್ಥಳಾಂತರಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಮಂಗಳೂರು, ಮೇ 19: ಸುಹಾಸ್ ಶೆಟ್ಟಿ ಹತ್ಯೆಯ ಆರೋಪಿ ನೌಷಾದ್ ಮೇಲೆ ಬಿ ಬ್ಯಾರಕ್‌ನ ಹಲವು ಸಹ ಕೈದಿಗಳಿಂದ ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತುಗಳಿಂದ ಅಟ್ಯಾಕ್ (Attack) ಮಾಡಿರುವಂತಹ ಘಟನೆ ಮಂಗಳೂರು ಸೆಂಟ್ರಲ್ ಜೈಲಿನಲ್ಲಿ ನಡೆದಿದೆ. ಅದೃಷ್ಟವಶಾತ್ ನೌಷಾದ್ ಪಾರಾಗಿದ್ದಾನೆ.
ಆರೋಪಿ ನೌಷಾದ್ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯವಾಗಿತ್ತು. ಹಾಗಾಗಿ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಮೈಸೂರು ಕಾರಾಗೃಹಕ್ಕೆ ಶಿಫ್ಟ್ ಮಾಡಲು ಸಿದ್ಧತೆ ನಡೆಸಿದ್ದರು. ಈ ಮಧ್ಯೆ ನೌಷಾದ್, ಮಂಗಳೂರು ಜೈಲಿನಲ್ಲಿ ಯಾರನ್ನೋ ನೋಡಬೇಕು ಎಂದಿದ್ದ. ಹಾಗಾಗಿ ಜೈಲಿನಲ್ಲಿ ಮತ್ತೋರ್ವ ಕೈದಿ ಭೇಟಿಗಾಗಿ ಪೊಲೀಸರು ಕರೆದುಕೊಂಡು ಬಂದಿದ್ದರು. ಈ ವೇಳೆ ಇದ್ದಕಿದ್ದಂತೆ ನೌಷಾದ್ ಮೇಲೆ ಸಹ ಕೈದಿಗಳು ಅಟ್ಯಾಕ್ ಮಾಡಿದ್ದಾರೆ.
ಆರೋಪಿ ನೌಷದ್ ಅಲಿಯಾಸ್ ವಾಮಂಜೂರು ನೌಷದ್ ಅಲಿಯಾಸ್ ನೌಷದ್, ಸುಹಾಸ್ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ.ಎಂದು ಆರೋಪಿಸಲಾಗಿದೆ. ಇತನ ವಿರುದ್ಧ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ ಮತ್ತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿವೆ.