ಕರ್ನಾಟಕದಲ್ಲಿ ಮಳೆಯ ಅಬ್ಬರ ಇಂದಿನಿಂದ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ. 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ,ದಾವಣಗೆರೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ರಾಮನಗರ, ಕೋಲಾರ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮಳೆಯ ಪ್ರಮಾಣ ಹೆಚ್ಚಿದ್ದರೂ ರೆಡ್ ಹಾಗೂ ಆರೆಂಜ್ ಅಲರ್ಟ್ ಇರುವ ಜಿಲ್ಲೆಗಳಿಗಿಂತ ಕಡಿಮೆ ಇರಲಿದೆ.
ಬೆಂಗಳೂರು, ಮೇ 21: ಕರ್ನಾಟಕದಾದ್ಯಂತ ಮುಂಗಾರು ಪೂರ್ವ(Rain)ಯ ಅಬ್ಬರ ಜೋರಾಗಿದೆ. ಅರಬ್ಬಿ ಸಮುದ್ರದಲ್ಲಾದ ವಾಯುಭಾರ ಕುಸಿತದಿಂದಾಗಿ ರಾಜ್ಯದ ಬಹುತೇಕ ಕಡೆ ವರುಣನ ಆರ್ಭಟ ಹೆಚ್ಚಾಗಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇಂದಿನಿಂದ ಮಳೆ ಚುರುಕಾಗಲಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ,ದಾವಣಗೆರೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ರಾಮನಗರ, ಕೋಲಾರ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮಳೆಯ ಪ್ರಮಾಣ ಹೆಚ್ಚಿದ್ದರೂ ರೆಡ್ ಹಾಗೂ ಆರೆಂಜ್ ಅಲರ್ಟ್ ಇರುವ ಜಿಲ್ಲೆಗಳಿಗಿಂತ ಕಡಿಮೆ ಇರಲಿದೆ.
ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯ ಪ್ರಮಾಣ ಹೆಚ್ಚಾಗಿದೆ.ಕಾರ್ಕಳ, ಯಲ್ಲಾಪುರ, ಮಂಗಳೂರು, ಗುತ್ತಲ್, ಪಣಂಬೂರು, ಕಳಸ, ಎಂಪ್ರಿ, ಕೋಲಾರ, ಮುಲ್ಕಿ, ಟಿಜಿ ಹಿಲ್ಸ್ನಲ್ಲಿ ಹೆಚ್ಚು ಮಳೆಯಾಗಿದೆ