ಬೆಂಗಳೂರು/ಹಾಸನ: ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅರಕಲಗೂಡು (Arakalagudu) ಯುವಕನೊಬ್ಬ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ ಘಟನೆ ಬೆಂಗಳೂರಿನ (Bengaluru) ಬಸವೇಶ್ವರ ನಗರದಲ್ಲಿ ನಡೆದಿದೆ.
ಮೃತನನ್ನು ಅರಕಲಗೂಡು ತಾಲೂಕಿನ ಕಾಡನೂರು ಗ್ರಾಮದ ಅಭಿಷೇಕ್ (19) ಎಂದು ಗುರುತಿಸಲಾಗಿದೆ. ಯುವಕ, ಗ್ರಾಮದ ಅನಸೂಯ ಹಾಗೂ ರಾಮಕೃಷ್ಣ ದಂಪತಿ ಪುತ್ರ ಎಂದು ತಿಳಿದು ಬಂದಿದೆ.
ಅಭಿಷೇಕ್ ಬಸವೇಶ್ವರ ನಗರದಲ್ಲಿ ನಿಂತಿದ್ದ ಜಾಗದಲ್ಲೇ ಕುಸಿದು ಬಿದ್ದಿದ್ದ. ಆತನನ್ನು ನೋಡಿದ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದರು. ಮಾರ್ಗ ಮಧ್ಯೆಯೇ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಮೃತನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.