ಬಂಟ್ವಾಳ :ಅಮಾಯಕ ಮುಸ್ಲಿಂ ಯುವಕನ ಬಾಡಿಗೆಗೆ ಕರೆಸಿ ವಂಚನೆ ಮೂಲಕ ಹತ್ಯೆನಡೆದಿದ್ದು, ಜಿಲ್ಲೆ ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು.. ನಾಳೆ ಮುಸ್ಲಿಂ ಸಂಘಟನೆ ಗಳು ಬಂದ್ ಗೆ ಕರೆ ನೀಡುವ ಸಾಧ್ಯತೆಇದೆ ಎನ್ನಲಾಗುತಿದೆ
ಸುಮಾರು 15 ಮಂದಿಯ ತಂಡ ಪಿಕ್ ಅಪ್ ವಾಹನ ವನ್ನು ಅಡ್ಡಗಟ್ಟಿ ಇಬ್ಬರು ಮುಸ್ಲಿಂ ಯುವಕರಿಗೆ ಬೀಕರವಾಗಿ ದಾಳಿ ನಡೆಸಿದ್ದ ಘಟನೆ ಕೊಳತ ಮಜಲುವಿನಲ್ಲಿ ನಡೆದಿತ್ತು. ಮತ್ತೊಬ್ಬ ಯುವಕನಿಗೆ ತೀವ್ರ ಗಾಯ ವಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ
ಘಟನೆ ನಡೆದ ತಕ್ಷಣ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿರುವ ಖಲಂದರ್ ಶಾಫಿಯ ಆರೋಗ್ಯ ವಿಚಾರಿಸಲು ಬಂದ ಮುಸ್ಲಿಂ ಮುಖಂಡರನ್ನು ಯುವಕರು ಅಡ್ಡ ಗಟ್ಟಿ ತರಾಟೆಗೆ ತೆಗೆದ ಪ್ರಸಂಗ ನಡೆಯಿತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದು ಮುಸ್ಲಿಂ ಸಮುದಾಯಕ್ಕೆ ರಕ್ಷಣೆ ಇಲ್ಲದಂತಾಗಿದೆ ಮೊನ್ನೆ ನಡೆದ ಹಿಂದೂ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದವರ ವಿರುದ್ಧ ಕ್ರಮ ಜಿಲ್ಲಾ ಆಡಳಿತ ಕೈಗೊಂಡಿದ್ದರೆ ಇಂತಹ ಘಟನೆಗಳು ಮರುಕಳಿಸುತ್ತಿರಲಿಲ್ಲ ಎಂದು ನಾಯಕರ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದರು ಸಮುದಾಯಕ್ಕೆ ನಿಮ್ಮ ನಾಯಕತ್ವದ ಅವಶ್ಯಕತೆ ಇಲ್ಲ ಎಂದು ಈ ಸಂದರ್ಭದಲ್ಲಿ ಗುಡುಗಿದರು.
