ಮಂಗಳೂರು: ಬಂಟ್ವಾಳ ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ತೆಂಕಬೆಳ್ಳೂರು ಗ್ರಾಮದ ಅಭಿನ್ ರೈ (32) ಮತ್ತು ಬಡಗಬೆಳ್ಳುರು ಗ್ರಾಮದ ತೇಜಾಕ್ಷ (24) ಎಂಬವರನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಶಕ್ಕೆ ಪಡೆದ ಈ ಆರೋಪಿಗಳಲ್ಲಿ ಅಭಿನ್ ರೈ ಎಂಬಾತ ಭರತ್ ಕುಮ್ದೇಲ್ ಸಹಚರನಾಗಿದ್ದು, ಅಶ್ರಫ್ ಕಲಾಯಿ ಹತ್ಯೆಯ ಆರೋಪಿ ಯಾಗಿದ್ದಾನೆ