ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಜಮ್ಮು-ಕಾಶ್ಮೀರದಲ್ಲಿ ಮೊದಲ ಹಬ್ಬ
ಶ್ರೀನಗರ: ದೇಶಾದ್ಯಂತ ಮುಸ್ಲಿಂ (Muslims) ಬಾಂಧವರಿಂದು ತ್ಯಾಗ-ಬಲಿದಾನ ಸಂಕೇತಿಸುವ ಪವಿತ್ರ ಬಕ್ರೀದ್ (Eid Al Adha) ಹಬ್ಬ ಆಚರಿಸುತ್ತಿದ್ದಾರೆ
ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶದ ಸಂಭಾಲ್, ಪಾಟ್ನಾದ ಗಾಂಧಿ ಮೈದಾನ, ನವದೆಹಲಿ, ಬೆಂಗಳೂರು, ಮಂಗಳೂರು ಸೇರಿದಂತೆ ವಿವಿಧೆಡೆ ಶಾಂತಿಯುವಾಗಿ ನಮಾಜ್ ಮಾಡುವ ಮೂಲಕ ಬಕ್ರೀದ್ ಹಬ್ಬ ಆಚರಿಸುತ್ತಿದ್ದಾರೆ. ವಿಶೇಷವೆಂದರೆ ಕೆಲ ದಿನಗಳ ಹಿಂದೆಯಷ್ಟೇ ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಸಂಘರ್ಷಪೀಡಿತವಾಗಿದ್ದ ಜಮ್ಮು-ಕಾಶ್ಮೀರದ ಪಾಲ್ಪೋರಾ (Sonwar) ಸೋನ್ವಾರ್‌ನ ಬಾಲಕಿಯರ ಪ್ರೌಢಶಾಲೆಯಲ್ಲಿ ಶಾಂತಿಯುತವಾಗಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದ್ದಾರೆ.
ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವುದು, ಸೋದರತ್ವ ಬೆಳೆಸಿಕೊಳ್ಳುವುದು, ಅಲ್ಲಾಹುವಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗಬೇಕು ಎಂಬ ಸಂದೇಶವನ್ನು ಈ ಹಬ್ಬ ಸಾರುತ್ತದೆ. ಈ ದಿನ ಮಸೀದಿಗಳಲ್ಲಿ ಸಾಮೂಹಿಕ ಈದ್ ನಮಾಜ್ ಇರುತ್ತದೆ. ಮಕ್ಕಳು, ಹಿರಿಯರು ಹೊಸ ಉಡುಗೆ ತೊಟ್ಟು ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವರು. ನಮಾಜ್‌ಗೂ ಮುನ್ನ ಕೆಲ ಹೊತ್ತು ‘ತಕ್ಷೀರ್’ ಮೊಳಗಿಸಲಾಗುತ್ತದೆ.
ಮನೆ ಮನೆಗಳಲ್ಲಿ ಹಬ್ಬದೂಟ:
ಮನೆಗಳಲ್ಲಿ ಹಬ್ಬದ ಊಟ, ವಿಶೇಷ ಖಾದ್ಯಗಳನ್ನು ತಯಾರಿಸುವರು. ಗೆಳೆಯರು, ಬಂಧುಗಳನ್ನು ಆಹ್ವಾನಿಸಿ ಜೊತೆಯಾಗಿ ಊಟ ಮಾಡಿ, ಸಂಭ್ರಮ ಹಂಚಿಕೊಳ್ಳುವರು. ಹಬ್ಬದ ದಿನ ದಾನವಾಗಿ ದೊರೆಯುವ ಮಾಂಸ, ಹಣ, ದಿನಸಿ ಸಾಮಗ್ರಿಗಳಿಂದ ಎಷ್ಟೋ ಬಡಕುಟುಂಬಗಳಿಗೂ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ಕಲ್ಪಿಸುತ್ತದೆ.
.