
ಬೆಂಗಳೂರು: ಮಾಜಿ ಸಚಿವ, ಗಾಲಿ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಸಿಬಿಐ ಕೋರ್ಟ್ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ಹಲವು ಷರತ್ತುಗಳನ್ನ ವಿಧಿಸಿ ಜಾಮೀನು ನೀಡಿದೆ.
10 ಲಕ್ಷ ರೂಪಾಯಿ ಮೌಲ್ಯದ 2 ಶ್ಯೂರಿಟಿ ನೀಡಲು ಸೂಚಿಸಿದೆ. ಜೊತೆಗೆ ಭಾರತ ಬಿಟ್ಟು ಹೋಗಲು ಜನಾರ್ದನ ರೆಡ್ಡಿ ಅನುಮತಿ ಇಲ್ಲ. ಪಾಸ್ಪೋರ್ಟ್ ವಶಕ್ಕೆ ಪಡೆಯಲು ಕೋರ್ಟ್ ಸೂಚನೆ ನೀಡಿದೆ. ಸಿಬಿಐನ ವಿಶೇಷ ನ್ಯಾಯಾಲಯವು ಏಳು ವರ್ಷ ಜೈಲು ಶಿಕ್ಷೆಯನ್ನು ವಿಧಿಸಿತ್ತು.
ಸುಮಾರು 16 ವರ್ಷಗಳ ಹಿಂದೆ ಈ ಪ್ರಕರಣವನ್ನು ಸಿಬಿಐ ದಾಖಲಿಸಿತ್ತು. ಪ್ರಕರಣ ದಾಖಲಾಗುವ ಸಮಯದಲ್ಲಿ ಆಂಧ್ರಪ್ರದೇಶ ಗೃಹ ಸಚಿವೆಯಾಗಿದ್ದ ಸಬಿತಾ ಇಂದ್ರಾ ರೆಡ್ಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಬಿ ಕೃಪಾನಂದಂ ವಿರುದ್ಧದ ಆರೋಪಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಗಿತ್ತು.