ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ
ಅಹಮದಾಬಾದ್: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ (Air India Plane) ಘಟನೆಗೆ ಸಂಬಂಧಿಸಿದಂತೆ ಈವರೆಗಿನ ಮಾಹಿತಿ ಪ್ರಕಾರ 110 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ವಿಮಾನದಲ್ಲಿ 230 ವಯಸ್ಕರು ಹಾಗು 2 ಮಕ್ಕಳನ್ನು ಒಳಗೊಂಡಂತೆ ಒಟ್ಟು 232 ಪ್ರಯಾಣಿಕರು ಇದ್ದರು. ಈ ಪೈಕಿ 169 ಮಂದಿ ಭಾರತೀಯರು ಇದ್ದರು. ಟೇಕಾಫ್ ಆದ ಒಂದೇ ನಿಮಿಷದಲ್ಲಿ ಸಂಪರ್ಕ ಕಡಿದುಕೊಂಡ ವಿಮಾನ ಎಂಜಿನ್‌ನಲ್ಲಿ ತಾಂತ್ರಿಕ ದೋಷದಿಂದಾಗಿ ಮೇಘಾನಿ ಪ್ರದೇಶದಲ್ಲಿ (Meghani Residential Area) ಪತನಗೊಂಡಿದೆ. ಹತ್ತಾರು ಅಂಬುಲೆನ್ಸ್‌ಗಳಲ್ಲಿ ಸುಟ್ಟು ಕರಕಲಾದ ದೇಹಗಳನ್ನು ಅಹಮದಾಬಾದ್‌ನ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗುತ್ತಿದೆ.
ಮೇಘಾನಿ ಪ್ರದೇಶದ ಬಿಜೆ ಮೆಡಿಕಲ್ ಕಾಲೇಜು ಹಾಸ್ಟೆಲ್‌ಗೆ ವಿಮಾನ ಬಡಿದ್ದಿದ್ದು, ಹಾಸ್ಟೆಲ್‌ನಲ್ಲಿದ್ದ ಎಂಬಿಬಿಎಸ್ ವಿದ್ಯಾರ್ಥಿಗಳು ಕೂಡ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ವಿಮಾನದಲ್ಲಿ ಇಬ್ಬರು ಪೈಲಟ್ ಹಾಗೂ 10 ಮಂದಿ ಸಿಬ್ಬಂದಿ ಇದ್ದರು. 300ರಿಂದ 600 ಅಡಿ ಎತ್ತರದಿಂದ ವಿಮಾನ ನೆಲಕ್ಕಪ್ಪಳಿಸಿದೆ.