ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನಗೊಂಡು ಪೈಲಟ್ ಸೇರಿ 7 ಮಂದಿ ಬಲಿಯಾಗಿರೋ ಘಟನೆ ಗೌರಿಕುಂಡ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಗುಪ್ತಕಾಶಿಯಿಂದ ಕೇದಾರನಾಥಕ್ಕೆ ಹೋಗುತ್ತಿದ್ದ ಆರ್ಯನ್ ಏವಿಯೇಷನ್‌ಗೆ ಸೇರಿದ ಹೆಲಿಕಾಪ್ಟರ್ ಗೌರಿಕುಂಡದ ಕಾಡಿನಲ್ಲಿ ಪತನಗೊಂಡಿದೆ. ವಿಮಾನದಲ್ಲಿ ಪೈಲಟ್ ಸೇರಿದಂತೆ 7 ಜನರು ಪ್ರಯಾಣಿಸುತ್ತಿದ್ದರು. ಕೇದಾರನಾಥ ಕಣಿವೆಯಲ್ಲಿ ಹವಾಮಾನ ವೈಪರಿತ್ಯದಿಂದ ಹೆಲಿಕಾಪ್ಟರ್ ಪತನವಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ಈ ವಿಷಯ ತಿಳಿದ ಕೂಡಲೇ ಅಪಘಾತದ ಸ್ಥಳಕ್ಕೆ ರಕ್ಷಣಾ ತಂಡಗಳು ದೌಡಾಯಿಸಿವೆ. ಈ ಘಟನೆ ಬಗ್ಗೆ ಹೆಚ್ಚಿನ ವಿವರವನ್ನು ಕಲೆ ಹಾಕುತ್ತಿದ್ದೇವೆ ಅಂತ ಉತ್ತರಾಖಂಡದ ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಡಾ. ವಿ. ಮುರುಗೇಶನ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.
ಮೊನ್ನೆಯಷ್ಟೇ ಗುಜರಾತ್ನ ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು 275 ಮಂದಿ ತಮ್ಮ ಜೀವವನ್ನು ಕಳೆದುಕೊಂಡಿದ್ದಾರೆ. ಲಂಡನ್ಗೆ ಹೊರಟಿದ್ದ ಬೋಯಿಂಗ್ ಡ್ರೀಮ್ಲೈನರ್ ವಿಮಾನದಲ್ಲಿ 242 ಪ್ರಯಾಣಿಸುತ್ತಿದ್ದರು. ಅದರಲ್ಲಿ ಅಚ್ಚರಿ ಎಂಬಂತೆ ಬ್ರಿಟಿಷ್ ಪ್ರಜೆ ವಿಶ್ವಾಸ್ ಕುಮಾರ್ ರಮೇಶ್ ಮಾತ್ರ ಬದುಕಿ ಉಳಿದಿದ್ದಾರೆ. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ.