Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ದ್ವೇಷ ಭಾಷಣದ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಖಾದರ್ ಅಸಮಾಧಾನ – ಗೃಹ ಸಚಿವರಿಗೆ ಪತ್ರ

editor tv by editor tv
June 17, 2025
in ರಾಜ್ಯ
0
ದ್ವೇಷ ಭಾಷಣದ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಖಾದರ್ ಅಸಮಾಧಾನ – ಗೃಹ ಸಚಿವರಿಗೆ ಪತ್ರ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ದ್ವೇಷ ಭಾಷಣಗಳ ವಿರುದ್ಧ ಪೊಲೀಸ್ ಅಧಿಕಾರಿಗಳ ಕ್ರಮದಲ್ಲಿನ ಅಸಮರ್ಪಕತೆಯ ಬಗ್ಗೆ ತನಿಖೆ ನಡೆಸುವಂತೆ ಸ್ಪೀಕರ್ ಯು.ಟಿ ಖಾದರ್ (U T Khader) ಅವರು ಗೃಹ ಸಚಿವ ಪರಮೇಶ್ವರ್ (Parameshwar) ಅವರಿಗೆ ಪತ್ರ ಬರೆದಿದ್ದಾರೆ.

ಇತ್ತೀಚೆಗೆ ರಾಜ್ಯದ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದ್ವೇಷಭರಿತ ಭಾಷಣಗಳು, ಪ್ರಚೋದನಾತ್ಮಕ ಹೇಳಿಕೆಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಸಮಾಜ ಘಾತುಕ ವದಂತಿಗಳು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಭಾರೀ ಧಕ್ಕೆ ಉಂಟುಮಾಡುವಂತಹ ಅಪಾಯಕಾರಿ ಸ್ಥಿತಿಯನ್ನು ನಿರ್ಮಾಣ ಮಾಡುತ್ತಿವೆ. ಈ ಗಂಭೀರ ಬೆಳವಣಿಗೆಯನ್ನು ನಾನು ಈ ಪತ್ರದ ಮೂಲಕ ತಮ್ಮ ಗಮನಕ್ಕೆ ತರಲು ಇಚ್ಛಿಸುತ್ತೇನೆ ಎಂದಿದ್ದಾರೆ. 

ಗಮನಾರ್ಹ ಸಂಗತಿಯೆಂದರೆ, ಈ ಹಿಂದಿನ ಕೆಲವು ಪೊಲೀಸ್ ಅಧಿಕಾರಿಗಳು ಈ ದ್ವೇಷ ಭಾಷಣ, ಪ್ರಚೋದನಕಾರಿ ಹೇಳಿಕೆಗಳು, ಸಾಮಾಜಿಕ ಮಾಧ್ಯಮಗಳಲ್ಲಿ ಸಮಾಜ ಘಾತುಕ ವದಂತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದೇ ಅಸಹಾಯಕತೆ ಅಥವಾ ನಿರ್ಲಕ್ಷ್ಯ ವಹಿಸಿದ್ದಾರೆ. ಆದರೆ ಈಗಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣದ ವಿರುದ್ಧ ಸಮರ್ಪಕ ಹಾಗೂ ತ್ವರಿತ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. 

ಒಂದು ವೇಳೆ, ಹಿಂದಿನ ಅಧಿಕಾರಿಗಳು ಸೂಕ್ತ ಸಮಯದಲ್ಲಿ ಕ್ರಮ ಕೈಗೊಂಡಿದ್ದರೆ ಕರಾವಳಿ ಭಾಗದಲ್ಲಿ ಒಂದೆರೆಡು ಧರ್ಮಾಧಾರಿತ ಕೊಲೆ ಮತ್ತು ಹಿಂಸಾಚಾರವನ್ನು ತಪ್ಪಿಸಬಹುದಾಗಿತ್ತು. ಈ ಹಿಂದೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ದರೋಡೆ, ಮಾದಕ ವಸ್ತು ಸಾಗಾಟ ಮತ್ತಿತರ ಸಮಾಜಘಾತುಕ ಕೆಲಸಗಳಲ್ಲಿ ನಿಷ್ಠೆಯಿಂದ, ತ್ವರಿತಗತಿಯಲ್ಲಿ ಸೂಕ್ತ ಕ್ರಮ ಕೈಗೊಂಡ ಈ ಹಿಂದಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣಗಳ ವಿರುದ್ಧ ಯಾಕೆ ಸೂಕ್ತ ಕ್ರಮ ಕೈಗೊಳ್ಳಲಿಲ್ಲ? ಅದಕ್ಕೆ ಕಾರಣಗಳೇನು ಅನ್ನುವ ಸೂಕ್ತ ತನಿಖೆಯಾಗಬೇಕಿದೆ ಎಂದು ಮನವಿ ಮಾಡಿದ್ದಾರೆ. 

ಆ ಮೂಲಕ ನಮ್ಮ ರಾಜ್ಯದ ಆಂತರಿಕ ಶಾಂತಿ, ಸಾಮರಸ್ಯ ಹಾಗೂ ಸಾರ್ವಜನಿಕ ನಂಬಿಕೆಯನ್ನು ಮತ್ತಷ್ಟು ಬಲಪಡಿಸಬಹುದು. ಈ ಆಶಯದಿಂದ ಈ ಪತ್ರವನ್ನು ತಮ್ಮ ಗಮನಕ್ಕೆ ತರುತ್ತಿದ್ದೇನೆ. ತಾವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕೆಂಬ ನನ್ನ ಅಭಿಪ್ರಾಯವನ್ನು ಈ ಮೂಲಕ ತಿಳಿಸುತ್ತಿದ್ದೇನೆ. ಅಲ್ಲದೇ ಹಿಂದಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣ ತಡೆಯಲು ವಿಫಲರಾಗಿದ್ದರು. ಅದರ ಬಗ್ಗೆ ತನಿಖೆ ಮಾಡಬೇಕು ಎಂದು ಪತ್ರದ ಮೂಲಕ ಆಗ್ರಹಿಸಿದ್ದಾರೆ.

Previous Post

ನಂತೂರು- ಪಂಪ್ವೆಲ್ ರಸ್ತೆಯಲ್ಲಿ ಭೀಕರ ಅಪಘಾತ: ದೇರಳಕಟ್ಟೆ ಆಸ್ಪತ್ರೆಯ ಯುವ ವೈದ್ಯ ಸ್ಥಳದಲ್ಲೇ ಮೃತ್ಯು

Next Post

ಬೆಂಗಳೂರು – ಲಂಡನ್‌ ಸೇರಿದಂತೆ ದಿಢೀರ್‌ 7 ಏರ್‌ ಇಂಡಿಯಾ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ರದ್ದು

Next Post
ಬೆಂಗಳೂರು – ಲಂಡನ್‌ ಸೇರಿದಂತೆ ದಿಢೀರ್‌ 7 ಏರ್‌ ಇಂಡಿಯಾ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ರದ್ದು

ಬೆಂಗಳೂರು – ಲಂಡನ್‌ ಸೇರಿದಂತೆ ದಿಢೀರ್‌ 7 ಏರ್‌ ಇಂಡಿಯಾ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ರದ್ದು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.