ಟೆಲ್ ಅವಿವ್/ಟೆಹ್ರಾನ್: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧಕ್ಕೆ ಅಮೆರಿಕ ಎಂಟ್ರಿಯಾಗಿದ್ದು ಅಪಾಯಕಾರಿ ಹಂತಕ್ಕೆ ತಲುಪಿದೆ. ಇಸ್ರೇಲ್ ಬೆಂಬಲಕ್ಕೆ ನಿಂತಿರುವ ಟ್ರಂಪ್ ಶರಣಾಗುವಂತೆ ಧಮ್ಕಿ ಹಾಕಿದ್ದಾರೆ. ಆದ್ರೆ ಅಮೆರಿಕ ಬೆದರಿಕೆಗೂ ಜಗ್ಗದ ಇರಾನ್‌ನ ಸರ್ವೋಚ್ಛ ನಾಯಕ (Iran’s Supreme Leader Ali Khamenei) ʻಯುದ್ಧ ಶುರುವಾಗಿದೆʼ ಎಂದು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಿರುಗೇಟು ನೀಡಿದ್ದಾರೆ.
ʻನಮಿ ಹೆಸರಿನಲ್ಲಿ, ಯುದ್ಧ ಪ್ರಾರಂಭವಾಗುತ್ತದೆ. ಅಲಿ ತನ್ನ ಜುಲ್ಫಿಕರ್‌ನೊಂದಿಗೆ ಖಮೇನಿಗೆ ಹಿಂತಿರುಗುತ್ತಾನೆ. ಹೈದರ್ ಹೆಸರಿನಲ್ಲಿ ಯುದ್ಧ ಶುರುವಾಗುತ್ತೆ, ಜಿಯೋನಿಸ್ಟ್ (ಯಹೂದಿಗಳು) ಗಳಿಗೆ ಯಾವುದೇ ಕರುಣೆ ತೋರಲ್ಲ. ಎಂದು ಅಯತೊಲ್ಲಾ ಅಲಿ ಖಮೇನಿ ಅವರ ಅನುವಾದ ಪೋಸ್ಟ್ ಸೂಚಿಸಿದೆ.
ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿಯನ್ನು ಸದ್ಯಕ್ಕೆ ನಾವು ಹತ್ಯೆ ಮಾಡುವುದಿಲ್ಲ. ಬದಲಾಗಿ ಅಲಿ ಖಮೇನಿ ಶರಣಾಗಬೇಕು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನೇರವಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಖಮೇನಿ ಅವರ ಈ ಪೋಸ್ಟ್ ಬಂದಿದೆ.