ಅಪರಾಧ ಪ್ರಕರಣಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬೇಕಾ ಬಿಟ್ಟಿ ಗೀಚಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ, ಸಾಮಾಜಿಕ ಜಾಲತಾಣಗಳಲ್ಲಿ ಆರೋಪ ಹೋರಿಸುವವರಿಗೆ ಬಿಸಿ ಮುಟ್ಟಿಸಲು ಪೊಲೀಸ್ ಇಲಾಖೆ ಮುಂದಾಗಿದೆ.
ಕೆಲವರು ಅಪರಾಧ ಪ್ರಕರಣಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರೇ ತನಿಖೆ ಮಾಡುತ್ತಿದ್ದಾರೆ. ಯಾವ ಪ್ರಕರಣದಲ್ಲಿ ಯಾರನ್ನು ಬಂಧಿಸಬೇಕು ಬಿಡಬೇಕು ಎಂದು ಅವರೇ ತೀರ್ಮಾನಿಸುತ್ತಿದ್ದಾರೆ. ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ತನಿಖೆ ಮಾಡುತ್ತಾರೆ. ಯಾರೇ ಆರೋಪಿತರು ಸಿಕ್ಕಿದರೂ ಬಂಧಿಸುತ್ತಾರೆ. ಯಾರ ವಿರುದ್ದ ಸಾಕ್ಷ್ಯ ಸಿಗಲ್ಲವೋ ಅವರನ್ನ ಬಂಧಿಸಲು ಸಾಧ್ಯವಿಲ್ಲ. ನಿಮ್ಮ ಬಳಿ ಸಾಕ್ಷ್ಯ ಇದ್ರೆ ಪೊಲೀಸ್ ಸ್ಟೇಷನ್ಗೆ ಬನ್ನಿ ಪರಿಗಣಿಸುತ್ತೇವೆ. ನಿರಾಪರಾಧಿಗಳ ಬಂಧನದ ವಿರುದ್ಧ ಸಾಕ್ಷಿ ಇದ್ದರೂ ತನ್ನಿ. ಅದನ್ನು ಬಿಟ್ಟು ಸೋಶಿಯಲ್ ಮೀಡಿಯಾದಲ್ಲಿ ಇನ್ವೆಸ್ಟಿಗೇಷನ್, ಟ್ರಯಲ್ ಮಾಡೋದು ಒಂದು ಅಪರಾಧ. ಹಾಗೆ ಮಾಡಿದರೆ ಅಂಥವರ ವಿರುದ್ಧವೂ ಪ್ರಕರಣ ದಾಖಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಚಕ್ರವರ್ತಿ ಸೂಲಿಬೆಲೆ ಉಪನ್ಯಾಸಕ್ಕೆ ಪೊಲೀಸರಿಂದ ನೋಟಿಸ್
ಚಿಂತಕ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸಕ್ಕೆ ಪೊಲೀಸರು ನೋಟಿಸ್ ನೀಡಿದ್ದಾರೆ. ಉಡುಪಿಯ ಕುಂದಾಪುರದಲ್ಲಿ ಜೂನ್ 20, 21, 22 ರಂದು ನಡೆಯಲಿರುವ ‘‘ಇನ್ನೀಗ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ’’ ಉಪನ್ಯಾಸ ಕಾರ್ಯಕ್ರಮ ನಡೆಸಲು ಅನುಮತಿ ನೀಡಿರುವ ಕುಂದಾಪುರ ಪೊಲೀಸರು ಆಯೋಜಕರಿಗೆ ಷರತ್ತು ವಿಧಿಸಿದ್ದಾರೆ. ಪೊಲೀಸರ ನಡೆಗೆ ಚಿಂತಕ ಸೂಲಿಬೆಲೆ ಸಾಮಾಜಿಕ ಜಾಲತಾಣ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೊಂದು ಅಘೋಷಿತ ಗಡೀಪಾರು ಎಂದಿದ್ದಾರೆ