ಮಂಗಳೂರು: MPMLA’s ನ್ಯೂಸ್ ಮತ್ತು MPMLASNEWSTV 24×7 news portal ಇದರ ವತಿಯಿಂದ 13ನೇ ಸೌಹಾರ್ದ ಸಂಗಮವು ಜೂನ್ 24ರ ಮಂಗಳವಾರ ಸಂಜೆ 4.00ರಿಂದ 9.00ರ ತನಕ ಕುದ್ಮುಲ್ ರಂಗರಾವ್ ಪುರಭವನ (ಟೌನ್‍ಹಾಲ್) ಮಂಗಳೂರಿನಲ್ಲಿ ನಡೆಯಲಿದೆ.
ಸೌಹಾರ್ದ ಸಂಗಮವನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಾಜಿ ಸಚಿವ ಬಿ. ರಮಾನಾಥ ರೈ, ಇಂಟರ್‍ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟನ ಅಧ್ಯಕ್ಷ ಎ. ಸದಾನಂದ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಉದ್ಘಾಟಿಸಲಿದ್ದು, ಮಾಜಿ ಮೇಯರ್ ದಿವಾಕರ ಕದ್ರಿಯವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರು ಸೌಹಾರ್ದ ಸಂದೇಶ ನೀಡಲಿದ್ದಾರೆ. ಸೌಹಾರ್ದ ಸಂಗಮದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್, ಮಾಜಿ ಸಂಸದ ನಳಿನ್‍ಕುಮಾರ್ ಕಟೀಲ್ ಮತ್ತು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅವರಿಗೆ ‘ಜನಸೇವಾ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು. ಭಾರತೀಯ ರಿಸರ್ವ್ ಬ್ಯಾಂಕ್ ಉತ್ತರ ವಲಯದ ಮಾಜಿ ನಿರ್ದೇಶಕ ಸಹಕಾರ ರತ್ನ ಡಾ. ಅಗರಿ ನವೀನ್ ಭಂಡಾರಿಯವರಿಗೆ ‘ಸೌಹಾರ್ದ ರತ್ನ’ ಪ್ರಶಸ್ತಿ, ಇಂಡಿಯನ್ ಸೋಷಿಯಲ್ ಮತ್ತು ಕಲ್ಚರಲ್ ಸೆಂಟರ್ ಅಬುದಾಬಿಯ ಅಧ್ಯಕ್ಷ ಮಿತ್ರಂಪಾಡಿ ಜಯರಾಮ್ ರೈಯವರಿಗೆ ‘ಕರುನಾಡ ರತ್ನ’ ಪ್ರಶಸ್ತಿ, ಪುಣೆಯ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ ಶೆಟ್ಟಿಯವರಿಗೆ ‘ಸಮಾಜ ರತ್ನ’ ಪ್ರಶಸ್ತಿ, ರೋಹನ್ ಕಾರ್ಪೊರೇಶನ್ ಆಡಳಿತ ನಿರ್ದೇಶಕ ಡಾ. ರೋಹನ್ ಮೊಂತೆರೋ ಅವರಿಗೆ ‘ಉದ್ಯಮ ರತ್ನ’ ಪ್ರಶಸ್ತಿ, ಖ್ಯಾತ ಶಸ್ತ್ರ ಚಿಕಿತ್ಸಾ ತಜ್ಞ ಡಾ. ಶ್ರೀರಾಮ್ ಭಟ್ ಎಂ. ಅವರಿಗೆ ‘ವೈದ್ಯ ರತ್ನ’ ಪ್ರಶಸ್ತಿ, ಕೆ.ಎಂ.ಸಿ. ಮಂಗಳೂರಿನ ಅಸೋಸಿಯೇಟ್ ಪ್ರೊಫೆಸರ್ ಆಫ್ ಗ್ಯಾಸ್ಟ್ರೋ ಎಂಟರಾಲಜಿ ಡಾ. ಅನುರಾಗ್ ಜೆ. ಶೆಟ್ಟಿ ಅವರಿಗೆ ‘ಬೆಸ್ಟ್ ಡಾಕ್ಟರ್ಸ್ ಅವಾರ್ಡ್’, ಬಂಟ್ವಾಳ ಅನಂತಾಡಿಯ ಜನಪ್ರಿಯ ಗಿಡಮೂಲಿಕಾ ಆಯುರ್ವೇದ ನಾಟಿ ವೈದ್ಯ ಗಂಗಾಧರ ಕರಿಯ ಪಂಡಿತ್ ಅವರಿಗೆ ‘ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಕಾರ್ಯಕ್ರಮದಲ್ಲಿ ಮೂಡಬಿದ್ರೆ ಶಾಸಕ ಉಮಾನಾಥ್ ಎ. ಕೋಟ್ಯಾನ್, ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಕೆಎಸ್‍ಆರ್‍ಟಿಸಿ ಡಿ.ಸಿ. ರಾಜೇಶ್ ಶೆಟ್ಟಿ, ಕರ್ನಾಟಕ ಸ್ಟೇಟ್ ಎಲೈಡ್ & ಹೆಲ್ತ್‍ಕೇರ್ ಕೌನ್ಸಿಲ್ ಅಧ್ಯಕ್ಷ ಡಾ. ಇಫ್ತಿಕಾರ್ ಅಲಿ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮ್ಯಾನೇಜಿಂಗ್ ಡೈರೆಕ್ಟರ್ ವಿವೇಕ್ ಡಿ., ನ್ಯಾಯವಾದಿಗಳಾದ ಕೆ. ದಯಾನಂದ ರೈ, ಅರುಣ್ ಶೆಟ್ಟಿ, ಉದ್ಯಮಿ ಅಜಿತ್ ಚೌಟ, ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ, ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ, ಎಂಸಿಎಫ್ ಲಿಮಿಟೆಡ್ ಎಚ್.ಆರ್.ನ ಡೆಪ್ಯೂಟಿ ಮೆನೇಜರ್ ದೀಕ್ಷಿತ್ ಶೆಟ್ಟಿ, ಕನ್ನಡ ಹಾಗೂ ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಕರ್ನಾಟಕ ಜನಪದ ಪರಿಷತ್‍ನ ಜಿಲ್ಲಾಧ್ಯಕ್ಷ ಪ್ರವೀಣ್‍ಕುಮಾರ್ ಕೊಡಿಯಾಲ್‍ಬೈಲ್ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್‍ನ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನದ ಅಧ್ಯಕ್ಷ ರಾಮಕೃಷ್ಣ ಆರ್., ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಚಲನಚಿತ್ರ ನಿರ್ದೇಶಕ-ಪತ್ರಿಕೋದ್ಯಮಿ ಪ್ರಕಾಶ್ ಪಾಂಡೇಶ್ವರ, ರಾಜ್ಯ ಪತ್ರಕರ್ತ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ್ ಶೆಟ್ಟಿ ಬಾಳ, ಸಹಕಾರಿ ನೌಕರರ ಸಹಕಾರ ಸಂಘ (ರಿ)ದ ಅಧ್ಯಕ್ಷ ಎಸ್. ಜಗದೀಶ್ಚಂದ್ರ ಸೂಟರ್‍ಪೇಟೆ, ನಮ್ಮ ಕುಡ್ಲ ಟಿ.ವಿ. ಚಾನೆಲ್‍ನ ಆಡಳಿತ ನಿರ್ದೇಶಕ ಲೀಲಾಕ್ಷ ಬಿ. ಕರ್ಕೆರ, ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ರಾಜೇಶ್ ಬಿ. ಮೊದಲಾದವರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಖ್ಯಾತ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ, ನಿವೃತ್ತ ಸರಕಾರಿ ವೈದ್ಯಾಧಿಕಾರಿ ಡಾ. ಜೂಲಿಯಾನ್ ಸಲ್ಡಾನ, ನರರೋಗ ತಜ್ಞ ಡಾ. ಬಿ. ಶಿವಾನಂದ ಪೈ, ಡಿ. ದೇವರಾಜು ಅರಸು ರಾಜ್ಯ ಪ್ರಶಸ್ತಿ ಪುರಸ್ಕøತ ಸಮಾಜ ವಿಜ್ಞಾನಿ ಡಾ| ಎಂ. ಅಣ್ಣಯ್ಯ ಕುಲಾಲ್ ಉಳ್ತೂರು ಮೊದಲಾದವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸುವರ್ಣ ಕರ್ನಾಟಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕನ್ನಡ ಮತ್ತು ತುಳು ಚಿತ್ರ ಹಿನ್ನಲೆ ಗಾಯಕ ಶ್ರೀ ರವೀಂದ್ರ ಪ್ರಭು ಮತ್ತು ಬಳಗದವರಿಂದ ‘ರಾಗ್ ರಂಗ್’ ‘ಸೌಹಾರ್ದ ಸಂಜೆ ಸುಗಮ ಸಂಗೀತ ರಸಮಂಜರಿ’ ಇದೆ. ಈ ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ದ.ಕ. ಮಂಗಳೂರು ಇದರ ಪ್ರಾಯೋಜಕತ್ವ ಇದೆ. ಕಾರ್ಯಕ್ರಮದಲ್ಲಿ ತುಳುನಾಡ ರತ್ನ ದಿನೇಶ್ ಅತ್ತಾವರ ನಿರ್ದೇಶನದಲ್ಲಿ ‘ಯುವಜಾಗೃತಿ’ ಎನ್ನುವ ಹಾಡು ನಾಟಕಗಳ ಸಮ್ಮಿಶ್ರಣ ವಿನೂತನ ಶೈಲಿಯ ಜಾಗೃತಿ ಕಾರ್ಯಕ್ರಮವು ರಂಗಚಲನ ಮಂಗಳೂರು ಇವರಿಂದ ಪ್ರದರ್ಶನಗೊಳ್ಳಲಿದೆ. ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದ್ದು, ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ‘ಸೌಹಾರ್ದ ಸಂಗಮ’ವನ್ನು ಯಶಸ್ವಿಗೊಳಿಸಬೇಕೆಂದು ಕಾರ್ಯಕ್ರಮದ ಸಂಘಟಕ ಡಾ. ಅಶೋಕ್ ಶೆಟ್ಟಿ ಬಿ.ಎನ್.ರವರು ವಿನಂತಿಸಿದ್ದಾರೆ.
ವಂದನೆಗಳೊಂದಿಗೆ,
ಇತೀ ತಮ್ಮ ವಿಶ್ವಾಸಿ ಅಶೋಕ್ ಶೆಟ್ಟಿ ಬಿ.ಎನ್.