
ಬೆಳಗಾವಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ವಿರುದ್ಧ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ.
ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿರುವ ವಿಡಿಯೋ ವೈರಲ್ ಆಗಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಬೆಂಬಲಿಗರೊಂದಿಗೆ ಭಾಗವಹಿಸಿದ ಅವರು, ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದೇ ವೇಳೆ ರಮೇಶ್ ಜಾರಕಿಹೊಳಿ ಅವರ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಜಾತ್ರೆಯಲ್ಲಿ ನೂರಾರು ಜನರ ನಡುವೆ ಹಾಗೂ ಪೊಲೀಸರ ಸಮ್ಮುಖದಲ್ಲೇ ಫೈರಿಂಗ್ ಮಾಡಲಾಗಿದೆ. ಹೀಗಾಗಿ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ ಜಾರಕಿಹೊಳಿ ವಿರುದ್ಧ ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಿಸಿದ್ದಾರೆ.