ಮಂಗಳೂರು: ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಂಗಳೂರಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದ ಬರ್ವಾನಿ ಮೋಹನ್ ಪಡವಾ ಗ್ರಾಮದ ಮಾಯಾರಾಮ್ (32), ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಪ್ರೇಮ್ಸಿಂಗ್ ರಾಮ ಪವಾರ (48), ಜಲಗಾಂವ್ನ ಅನಿಲ್ ಪ್ರಕಾಶ್ ಕೋಲಿ (35) ಬಂಧಿತ ಆರೋಪಿಗಳು.
ಜು. 2ರಂದು ಮಂಗಳೂರು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. 6 ಮಂದಿಯನ್ನು ಪತ್ತೆ ಮಾಡಿ ಈಗಾಗಲೇ ಬಂಧಿಸಲಾಗಿದೆ. ಪ್ರಕರಣದ ತನಿಖೆ ವೇಳೆ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಿಂದ ಮಂಗಳೂರಿಗೆ ಮಾದಕ ವಸ್ತು ಸರಬರಾಜು ಆಗುತ್ತಿರುವ ಮಾಹಿತಿ ತಿಳಿದು ಬಂದಿತ್ತು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಕ್ಕೆ ವಿಶೇಷ ತಂಡ ಕಳುಹಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ 3 ಮೊಬೈಲ್ ಫೋನ್ಗಳು ಹಾಗೂ 1,78,920 ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣದ ಆರೋಪಿತರ ಪತ್ತೆ ಕಾರ್ಯದಲ್ಲಿ ಕ್ರೈಂ ಪೊಲೀಸ್ ಠಾಣಾ ಮತ್ತು ಮಂಗಳೂರುನಗರದ ವಿಶೇಷ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.