Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

Breaking: ಧರ್ಮಸ್ಥಳ ಪ್ರಕರಣವನ್ನು SIT ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

editor tv by editor tv
July 20, 2025
in ರಾಜ್ಯ
0
Breaking: ಧರ್ಮಸ್ಥಳ ಪ್ರಕರಣವನ್ನು SIT ತನಿಖೆಗೆ ವಹಿಸಿದ ರಾಜ್ಯ ಸರ್ಕಾರ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮಹಿಳೆಯರು, ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣದ, ಅತ್ಯಾಚಾರ, ಕೊಲೆ ತನಿಖೆಯನ್ನು ರಾಜ್ಯ ಸರ್ಕಾರ ಎಸ್​ಐಟಿಗೆ  (Special Investigation Team) ವಹಿಸಿದೆ.

ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ ಡಾ.ಪ್ರಣವ್ ಮೊಹಂತಿ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡಿದೆ. ಎಸ್ಐಟಿ ಸದಸ್ಯರಾಗಿ ಅನುಚೇತ್, ಸೌಮ್ಯಲತಾ, ಜಿತೇಂದ್ರಕುಮಾರ್ ಕೂಡ ಇದ್ದಾರೆ. ಈ ವಿಶೇಷ ತನಿಖಾ ತಂಡವು ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರು, ವಿದ್ಯಾರ್ಥಿನಿಯರು, ಹಲ್ಲೆ, ಅತ್ಯಾ*ಚಾರ, ಅಸ್ವಾಭಾವಿಕ ಸಾ*ವಿನ ಬಗ್ಗೆ ತನಿಖೆ ನಡೆಸಲಿದೆ.

ಸರ್ಕಾರದ ಆದೇಶದಲ್ಲಿ ಏನಿದೆ..?

ವಿಷಯ: ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ. 211(ಎ), ಬಿ.ಎನ್.ಎಸ್ ಅಡಿಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಇದರ ಸಂಬಂಧ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಬಹುದಾದ ಪ್ರಕರಣಗಳ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸುವ ಬಗ್ಗೆ..

ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷರ ಪತ್ರದಲ್ಲಿ ಧರ್ಮಸ್ಥಳದ ಭಾಗದಲ್ಲಿ ನೂರಾರು ಶ*ವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ. ದಿನಾಂಕ: 12-07-2025ರಂದು ಟೈಮ್ಸ್ ನೌ ಮತ್ತಿತರ ಮಾಧ್ಯಮಗಳು ಮನುಷ್ಯರೊಬ್ಬರ ತಲೆಬುರುಡೆ ದೊರಕಿದ ಬಗ್ಗೆ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದವರ ಹೇಳಿಕೆಯ ವರದಿ ಪ್ರಸಾರವಾಗಿರುವುದನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದೆ.

ಈ ಮಾಧ್ಯಮ ವರದಿ ಮತ್ತು ಶವಗಳನ್ನು ಹೂತಿರುವ ವ್ಯಕ್ತಿಯ ಹೇಳಿಕೆಯಲ್ಲಿ ಕಳೆದ 20ಕ್ಕೂ ಹೆಚ್ಚು ವರ್ಷ ಗಂಭೀರ ಸ್ವರೂಪದ ದೌರ್ಜನ್ಯ, ಹ*ತ್ಯೆ, ಅತ್ಯಾ*ಚಾರ, ಅಸ್ವಾಭಾವಿಕವಾದ ಸಾ*ವು ಮತ್ತು ನಾಪತ್ತೆ ಪ್ರಕರಣಗಳು ಹಲವು ಮಹಿಳೆಯರ, ವಿದ್ಯಾರ್ಥಿನಿಯರ ಮೇಲೆ ನಡೆದಿರುವ ಬಗ್ಗೆ ತಿಳಿಸಲಾಗಿದೆ. ಹಾಗಾಗಿ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕವಾದ ಸಾ*ವು/ಕೊಲೆ ಪ್ರಕರಣಗಳು ಮತ್ತು ಅತ್ಯಾ*ಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸುವಂತೆ ಕೋರಿರುತ್ತಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ 211(ಎ), ಬಿ.ಎನ್.ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಆಯೋಗ ರವರ ಪತ್ರದಲ್ಲಿ ಪ್ರಸ್ತಾಪಿಸಿರುವ ಅಂಶಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ 211(ಎ), ಬಿ.ಎನ್.ಎಸ್, ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಯನ್ನು ಕೈಗೊಳ್ಳಲು ಒಂದು ವಿಶೇಷ ತನಿಖಾ ತಂಡ (Special Investigation Team)ವನ್ನು ರಚಿಸುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿದೆ ಎಂದು ಸರ್ಕಾರ ತಿಳಿಸಿದೆ.

ಎಸ್​ಐಟಿನಲ್ಲಿ ಇರೋರು ಯಾರು..?

ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಡಾ.ಪ್ರವಣ ಮೋಹಂತಿ ಎಸ್ಐಟಿಗೆ ಮುಖ್ಯಸ್ಥರಾಗಿರುತ್ತಾರೆ. ಇನ್ನು ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರೀಕ್ಷಕ ಎಂ.ಎನ್​.ಅನುಚೇತ್, ಸಿಎಆರ್ ಕೇಂದ್ರಸ್ಥಾನದ ಉಪ ಪೊಲೀಸ್ ಆಯುಕ್ತೆ ಸೌಮ್ಯಲತ, ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ್ ಎಸ್​ಐಟಿ ತಂಡದ ಸದಸ್ಯರಾಗಿರುತ್ತಾರೆ.

Previous Post

ಗಾಝಾ: ಆಹಾರ ಪೂರೈಕೆಗೆ ಇಸ್ರೇಲ್ ಅಡ್ಡಿ: ಹಸಿವಿನಿಂದ ಸಾಯುತ್ತಿರುವ ಜನರು

Next Post

ಟೈಟಾನಿಕ ಮಾದರಿಯಲ್ಲೇ ಮತ್ತೊಂದು ದುರಂತ.. 280 ಪ್ರಯಾಣಿಕರಿದ್ದ ಹಡಗಿನಲ್ಲಿ ಭಾರೀ ಬೆಂಕಿ; VIDEO

Next Post

ಟೈಟಾನಿಕ ಮಾದರಿಯಲ್ಲೇ ಮತ್ತೊಂದು ದುರಂತ.. 280 ಪ್ರಯಾಣಿಕರಿದ್ದ ಹಡಗಿನಲ್ಲಿ ಭಾರೀ ಬೆಂಕಿ; VIDEO

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.