ಮಂಗಳೂರು: ಕೊಳ್ತಮಜಲು ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪುದು ಗ್ರಾಮದ ಸಚಿನ್ ಯಾನೆ ಸಚ್ಚು ರೊಟ್ಟಿಗುಡ್ಡೆ (32) ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗೆ ಮತ್ತೆ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.